ನಾವೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಳ್ಯೋಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ – ವಾರ್ಷಿಕೋತ್ಸವ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಊರವರ ಸಹಭಾಗಿತ್ವದಲ್ಲಿ ಶಾಲಾ ವಾರ್ಷಿಕೋತ್ಸವವು ಡಿ.18 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಡಿ. 4 ರಂದು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಡಿ,ಎಮ್.ಸಿ ಅಧ್ಯಕ್ಷ ಬಾಲಕೃಷ್ಣ ಅರುವಾಲು, ವಾರ್ಷಿಕೋತ್ಸವದ ಅಧ್ಯಕ್ಷ ಯುವರಾಜ ಭಂಡಾರಿ ಇಡ್ದ್ಯಾಳ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸೌಮ್ಯ , ಸಮಿತಿಯ ಸರ್ವ ಸದಸ್ಯರು, ಶಾಲಾ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.