ಬೆಳ್ತಂಗಡಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಕರೆಕೊಟ್ಟಂತಹ ಹೋರಾಟಕ್ಕೆ ಡಿ 4ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ
ಭಾರತೀಯ ಜನತಾ ಪಾರ್ಟಿ ಯ ಸುಮಾರು 1500 ಮಂದಿ ಕಾರ್ಯಕರ್ತರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷತ್ ಭಜರoಗದಳ ವಿವಿಧ ಧಾರ್ಮಿಕ ಮುಖಂಡರು, ಬಿಜೆಪಿ ವಿವಿಧ ಮೋರ್ಚಾ , ಮಹಾಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.