ಬೆಳ್ತಂಗಡಿ: ಕಳೆದ ಸಲದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಸವಿತಾ ಹಾಗೂ ಪುರುಷೋತ್ತಮ ದಂಪತಿಯ ಪುತ್ರ ಪ್ರಥಮ್ ಎಸ್.ಪಿ. ರವರಿಗೆ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಧ್ಯಕ್ಷ ಡಾ. ಕೆ ಜಯಕೀರ್ತಿ ಜೈನ್ ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ವತ್ಸಲಾ ಜ್ಯೋತಿರಾಜ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.