25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ ನಡೆಸಲು ಸಿದ್ಧತೆ ಮಾಡುತ್ತಿರುವುದು ಕಂಡು ಬಂದಿದೆ.


ರಾಜ್ಯದಲ್ಲಿ ಇತ್ತಿಚೇಗೆ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಆಡಳಿತಪಕ್ಷ ಕಾಂಗ್ರೆಸ್, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೂ ಸನ್ನದ್ಧವಾಗಿದೆ. ಇತ್ತಿಚೇಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಾ.ಪಂ, ಜಿ.ಪಂ. ಚುನಾವಣೆ ನಡೆಸುವ ಸುಳಿವು ನೀಡಿದ್ದಾರೆ. ಈ ಎಲ್ಲ ಬೆಳವಣಿಗೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಂಡಿದೆ. ಹೈಕೋರ್ಟ್ ನಿರ್ದೇಶನದನ್ವಯ ಡಿ.೧೨ರ ಒಳಗಾಗಿ ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸುವ ನಿರೀಕ್ಷೆ ಹೊಂದಿರುವುದಾಗಿ ರಾಜ್ಯ ಚುನಾವಣಾ ಆಯೋಗದ ಅಧ್ಯಕ್ಷ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ಸರ್ಕಾರ ಡಿ.12 ರ ಒಳಗಾಗಿ ಮೀಸಲಾತಿ ಪ್ರಕಟಿಸಿದರೆ ಜನವರಿ ಅಂತ್ಯ ಇಲ್ಲವೇ ಫೆಬ್ರವರಿಯಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತಯಾರಿದೆ ಎಂದು ಹೇಳಿದ್ದಾರೆ.


ತಾ.ಪಂ, ಜಿ.ಪಂಗೆ ಚುನಾವಣೆಯಾಗದೆ ಮೂರು ವರ್ಷ:
ತಾಲೂಕು ಪಂಚಾಯತು ಮತ್ತು ಜಿಲ್ಲಾ ಪಂಚಾಯತಕ್ಕೆ 2021 ಮೇ, ಜೂನ್ ತಿಂಗಳಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಮೂರು ವರ್ಷ ಕಳೆದರೂ, ಇದುವರೆಗೂ ಚುನಾವಣೆ ನಡೆದಿಲ್ಲ, ತಾ.ಪಂ, ಜಿ.ಪಂ ಕ್ಷೇತ್ರಗಳ ಪುನರ್ವಿಂಗಡಣೆ, ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಸೇರಿದಂತೆ ವಿವಿಧ ಕಾರಣಗಳಿಂದ ೨೦೨೧ ಸಾಲಿನ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಚುನಾವಣೆ ಮುಂದೂಡುತ್ತಾ ಬರಲಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಹೈಕೋರ್ಟ್ ಮಟ್ಟಿಲೇರುತ್ತಿರುವ ಕಾರಣ ಚುನಾವಣೆ ವಿಳಂಬವಾಗಿವೆ. ಹೈಕೋರ್ಟ್ ಇತ್ತೀಚೆಗೆ ಸ್ಪಷ್ಟ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ರಾಜ್ಯದಲ್ಲಿ 31 ಜಿಲ್ಲೆಗಳ 239 ತಾಲೂಕುಗಳಲ್ಲಿ ಒಟ್ಟು 1130 ಜಿಲ್ಲಾ ಪಂಚಾಯಿತಿ ಸದಸ್ಯ ಕ್ಷೇತ್ರ ಹಾಗೂ 3671 ತಾಲೂಕು ಪಂಚಾಯಿತಿ ಸದಸ್ಯ ಕ್ಷೇತ್ರಗಳನ್ನು ವಿಂಗಡಿಸಲಾಗಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ7 ಜಿಲ್ಲಾ ಪಂಚಾಯತ್ ಕ್ಷೇತ್ರ ಹಾಗೂ 22 ತಾಲೂಕು ಪಂಚಾಯತ್ ಕ್ಷೇತ್ರಗಳನ್ನಾಗಿ ಪುನರ್‌ವಿಂಗಡಣೆ ಮಾಡಲಾಗಿದೆ.

Related posts

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!