29.7 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ(175)ರಲ್ಲಿ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.

ಅರ್ಜಿಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು, ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ . 12. ಆಗಿರುತ್ತದೆ.

ಅರ್ಹತೆಗಳು: ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳು ಮೀರತಕ್ಕದ್ದಲ್ಲ, ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಬಾರದು, ಮೂಲನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು, ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನ್ನು ಸಲ್ಲಿಸತಕ್ಕದ್ದು, ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ, ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya
error: Content is protected !!