ಅಳದಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿ ಇಲ್ಲಿಯ ವಿದ್ಯಾರ್ಥಿ ಬಿ ಎಸ್ ಪ್ರೇಕ್ಷಿತ್ 20kg ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.