30.5 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

ಬೆಳ್ತಂಗಡಿ: ಸಾಕಷ್ಟು ಮಲೆಕುಡಿಯ ಕುಟುಂಬಗಳು ರಸ್ತೆ ಹಾಗೂ ವಿದ್ಯುತ್ ಸೌಲಭ್ಯದಿಂದ ವಂಚಿತವಾಗಿವೆ. ಪ್ರಥಮ ಆಧ್ಯತೆಯಾಗಿ ವಿದ್ಯುತ್ ಹಾಗೂ ರಸ್ತೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಂಡು ಹಂತ ಹಂತವಾಗಿ ಮಲೆಕುಡಿಯ ಸಮುದಾಯದ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರು ಹೇಳಿದರು.


ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಲೆಕುಡಿಯ ಸಮುದಾಯದ ಮುಖಂಡರ ಬೇಡಿಕೆ, ಸಮಸ್ಯೆಗಳನ್ನು ಆಲಿಸಿದ ಅವರು ಮಲೆಕುಡಿಯ ಸಮುದಾಯದ ವಿವಿಧ ಸಮಸ್ಯೆಗಳ ಪರಿಹಾರ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಹಾಗೂ ಮಲೆಕುಡಿಯ ಸಂಘದ ಪ್ರಮುಖರ ಜೊತೆ ಸಮಾಲೋಚನೆ ನಡೆಸಿದರು.


ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಎಳನೀರು ಮಾತನಾಡಿ ಮಲೆಕುಡಿಯ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 10-15 ವರ್ಷದಿಂದ ಬೇಡಿಕೆಯನ್ನು ಸಲ್ಲಿಸುತ್ತಾ ಬಂದಿದ್ದು ಇದುವರೆಗೂ ಫಲಪ್ರದವಾಗಿಲ್ಲ. ವಿದ್ಯುತ್ ಪಡೆಯಲು ಯಾವ ರೀತಿ ಅರ್ಜಿ ಸಲ್ಲಿಸಬೇಕೆಂದು ಸ್ಪಷ್ಟಪಡಿಸಿ ಎಂದು ಒತ್ತಾಯಿಸಿದರು. ಜೊತೆಗೆ ವಿವಿಧ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಸರಿಯಾದ ಮಾಹಿತಿ ಇಲಾಖೆಗಳಿಂದ ದೊರೆಯುತ್ತಿಲ್ಲ ಹಾಗಾಗಿ ಸಾಕಷ್ಟು ಜನರು ಸರಕಾರದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದರು. ಸುಲ್ಕೇರಿಯ ನಾಯಿದಗುರಿಯ ಸಮಸ್ಯೆಯನ್ನು ಆದಷ್ಟು ಬೇಗ ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಲಾಯಿತು.


ವಿದ್ಯುತ್ ಸಂಪರ್ಕ ಪಡೆಯುವ ಬಗ್ಗೆ ವೆಂಕಪ್ಪ ಬೊಟ್ಟಿತ್ತಿಲ್ ಇಲಾಖಾಧಿಕಾರಿಗಳಿಗೆ ದಾಖಲೆ ತೋರಿಸಿದರು. ಬೆಳ್ತಂಗಡಿ ತಾ. ಸಮಿತಿ ಕಾರ್ಯದರ್ಶಿ ಜಯಾನಂದ ಪಿಲಿಕಲ ಜಾತಿ ಪ್ರಮಾಣ ಪತ್ರವನ್ನು ಮಲೆಕುಡಿಯ ಎಂಬುದಾಗಿ ನೀಡಬೇಕು ಎಂದು ಆಗ್ರಹಿಸಿದರು ಹಾಗೂ 94 ಸಿ ಸಮಸ್ಯೆಯನ್ನು ಗಮನಕ್ಕೆ ತಂದರು.


ಪುತ್ತೂರು ತಾ. ಸಮಿತಿ ಅಧ್ಯಕ್ಷ ಜಯಪ್ರಕಾಶ್ ಕಲಬೆರಕೆ ಹಾಗೂ ಕಳಪೆ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ಮನೆ ಇಲ್ಲದಿರುವುದು, ರೇಷನ್ ಕಾರ್ಡ್ ಇಲ್ಲದಿರುವುದು, ಅಕ್ರಮ ಸಕ್ರಮ, ಹೀಗೆ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಯಿತು.
ರಾಜ್ಯ ಮಲೆಕುಡಿಯ ಸಂಘದ ಉಪಾಧ್ಯಕ್ಷೆ ವಸಂತಿ ನೆಲ್ಲಿಕಾರು, ದ.ಕ. ಜಿಲ್ಲಾ ಸಮಿತಿ ಕಾರ್ಯದರ್ಶಿ ಜಯೇಂದ್ರ ಎಂ. ನಿಡ್ಲೆ, ಜೊತೆ ಕಾರ್ಯದರ್ಶಿ ಲಕ್ಷಣ ನೆರಿಯ, ಸದಸ್ಯೆ ವಿನೋದಾ ಪುತ್ತೂರು, ತನಿಯಪ್ಪ ಬೆಟ್ಟಂಪಾಡಿ, ಉಮೇಶ್ ನಾರಾವಿ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya
error: Content is protected !!