ಬಳಂಜ: ಇಲ್ಲಿಯ ಜನತಾ ಕಾಲನಿ ನಿವಾಸಿ ವಸಂತಿರವರು ಡಿ. 6 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ.
ಇವರು ಕೆಲವು ದಿನಗಳಿಂದ ವಿಪರೀತ ಜ್ವರ ದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಮೃತರು ಮುಂಬೈನಲ್ಲಿ ಉದ್ಯೋಗದಲ್ಲಿರುವ ಪತಿ ವಸಂತ ಹಾಗೂ ಐದು ತಿಂಗಳ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ.