ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ ನಾಲ್ಕು ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಗಾಂಧಿಜಿಯವರ 155 ನೇ ಜಯಂತಿಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ 10 ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. 10 ನೇ ತರಗತಿಯ ತನ್ವಿತ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ . ಆಂಗ್ಲ ಭಾಷಾ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿಯ ಶ್ರೀನಿಕಾ ಪ್ರಥಮ ಸ್ಥಾನ 8 ತರಗತಿಯ ವೀಕ್ಷಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ .