ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಸಮಿತಿಯ ರಚನೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ನೇತೃತ್ವದಲ್ಲಿ ಡಿ.7 ರಂದು ನಡೆಯಿತು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪ್ರಶಾಂತ್ ಗೌಡ ನಿರುಬುಂಡ, ಉಪಾಧ್ಯಕ್ಷರಾಗಿ ಪುಷ್ಪಾ ನೇಮಕಗೊಂಡರು. ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ. ಮಾಜಿ ಸದಸ್ಯ ಕೃಷ್ಣಯ್ಯ, ಮುಖ್ಯೋಪಾಧ್ಯಾಯಿನಿ ಚಂದ್ರವಾತಿ ಹಾಗೂ ಪೊಷಕರು ಉಪಸ್ಥಿತರಿದ್ದರು.