24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧನ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ,ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಬೆಳ್ತಂಗಡಿ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಡಿ.7ರಂದು ಮನವಿ ಸಲ್ಲಿಸಲಾಯಿತು.

ಡಿ.6 ರಂದು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಗ್ರಾಮದ ಸ.ನಂ 123/1 ರ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದ ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯಾದ ಸಿದ್ದಲಿಂಗ ಜಂಗಮಶೆಟ್ಟಿ ರವರ ಮೇಲೆ ಜಮೀನು ಅತಿಕ್ರಮಣದಾರರಾದ ರೇಣುಕಾ ಕೋಂ ವಿಶ್ವನಾಥ ಎಂಬುವವರ ತಂದೆ ಮುತ್ತು ಸ್ವಾಮಿ ಮತ್ತು ಇತರರು ಸೇರಿ ಹಲ್ಲೆ ಮಾಡಿರುತ್ತಾರೆ.
ಈ ಘಟನೆಯನ್ನು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆಯಿಂದ ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮನೋಸ್ಥೆರ್ಯ ಕುಂದಿದ್ದು, ಕ್ಷೇತ್ರಮಟ್ಟದಲ್ಲಿ ಭಯದಿಂದಲೇ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಾದ ಮುತ್ತು ಸ್ವಾಮಿ ಮತ್ತು ಇತರರನ್ನು ಕೂಡಲೇ ಬಂಧಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಡಿ.8 ರೊಳಗೆ ಆರೋಪಿತರ ಬಂಧನವಾಗದೇ ಇದ್ದಲ್ಲಿ ಡಿ.9ರಿಂದ ತಾಲೂಕಿನ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಲೇಖನಿ ಸ್ಥಗಿತ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಅಪಘಾತದಲ್ಲಿ ನಿಧನರಾದ ದಿ. ಶೇಖರ ಬಂಗೇರರಿಗೆ ನುಡಿನಮನ

Suddi Udaya

ಹೊಕ್ಕಾಡಿಗೋಳಿ ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಇದರ ಆಶ್ರಯದಲ್ಲಿ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ಛಾಯಾಗ್ರಹಕ‌ ರಾಮಕೃಷ್ಣ ರೈ ಅವರಿಗೆ ಸನ್ಮಾನ

Suddi Udaya
error: Content is protected !!