September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಬೆಳ್ತಂಗಡಿ: ಕಡಬ ತಾಲೂಕು ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯವರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಶೀಘ್ರ ಬಂಧನ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ,ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಬೆಳ್ತಂಗಡಿ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಡಿ.7ರಂದು ಮನವಿ ಸಲ್ಲಿಸಲಾಯಿತು.

ಡಿ.6 ರಂದು ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಗ್ರಾಮದ ಸ.ನಂ 123/1 ರ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿದ ಕೌಕ್ರಾಡಿ ಗ್ರಾಮ ಆಡಳಿತ ಅಧಿಕಾರಿಯಾದ ಸಿದ್ದಲಿಂಗ ಜಂಗಮಶೆಟ್ಟಿ ರವರ ಮೇಲೆ ಜಮೀನು ಅತಿಕ್ರಮಣದಾರರಾದ ರೇಣುಕಾ ಕೋಂ ವಿಶ್ವನಾಥ ಎಂಬುವವರ ತಂದೆ ಮುತ್ತು ಸ್ವಾಮಿ ಮತ್ತು ಇತರರು ಸೇರಿ ಹಲ್ಲೆ ಮಾಡಿರುತ್ತಾರೆ.
ಈ ಘಟನೆಯನ್ನು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘ ವತಿಯಿಂದ ತೀವ್ರವಾಗಿ ಖಂಡಿಸುತ್ತೇವೆ. ಈ ಘಟನೆಯಿಂದ ಕ್ಷೇತ್ರಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಮನೋಸ್ಥೆರ್ಯ ಕುಂದಿದ್ದು, ಕ್ಷೇತ್ರಮಟ್ಟದಲ್ಲಿ ಭಯದಿಂದಲೇ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿರುತ್ತದೆ.
ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಾದ ಮುತ್ತು ಸ್ವಾಮಿ ಮತ್ತು ಇತರರನ್ನು ಕೂಡಲೇ ಬಂಧಿಸುವಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಭಯ ಮುಕ್ತ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡುವಂತೆ ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಡಿ.8 ರೊಳಗೆ ಆರೋಪಿತರ ಬಂಧನವಾಗದೇ ಇದ್ದಲ್ಲಿ ಡಿ.9ರಿಂದ ತಾಲೂಕಿನ ಸಮಸ್ತ ಗ್ರಾಮ ಆಡಳಿತ ಅಧಿಕಾರಿಗಳು ಲೇಖನಿ ಸ್ಥಗಿತ ಹೋರಾಟಕ್ಕೆ ಇಳಿಯಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಬಹುದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಾ:29: ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya
error: Content is protected !!