23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಡಿ.6 ರಂದು ಸದ್ರಿ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಜಿಲ್ಲಾ ಅಧಿಕಾರಿ ಹಾಗೂ ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಗಿದೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸರ್ವೆ ನಂ.123/1ರ ಸರಕಾರಿ ಜಾಗದಲ್ಲಿ ರೇಣುಕಾ ಕೋಂ ವಿಶ್ವನಾಥ ಎಂಬವರು ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಡಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ನ.13ರಂದು ತೆರವು ಮಾಡಲಾಗಿತ್ತು. ಅದೇ ಸ್ಥಳದಲ್ಲಿ ಪುನ: ಕಟ್ಟಡವನ್ನು ನಿರ್ಮಿಸುತ್ತಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿ.6ರಂದು ಗ್ರಾಮ ಆಡಳಿತಾಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ರೇಣುಕಾರವರ ತಂದೆ ಮುತ್ತುಸ್ವಾಮಿ ಮತ್ತು ಇತರರು ಹಲ್ಲೆ ಮಾಡಿ ಮನೆ ನಿರ್ಮಾಣವನ್ನು ಮುಂದುವರೆಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಗಾಯಗೊಂಡ ಗ್ರಾಮ ಆಡಳಿತಾಧಿಕಾರಿ ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಕಾರಿ ಕರ್ತವ್ಯದಲ್ಲಿದ್ದ ನೌಕರನ ಮೇಲೆ ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕಡಬ ತಹಶೀಲ್ದಾರ್ ಅವರು ದ.ಕ.ಜಿಲ್ಲಾಧಿಕಾರಿಯವರಿಗೆ, ಪುತ್ತೂರು ಉಪ ಸಹಾಯಕ ಆಯುಕ್ತರಿಗೆ ಹಾಗೂ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

Related posts

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಲಾಯಿಲ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya
error: Content is protected !!