September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಡಿ.6 ರಂದು ಸದ್ರಿ ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ, ಜಿಲ್ಲಾ ಅಧಿಕಾರಿ ಹಾಗೂ ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಗಿದೆ.

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸರ್ವೆ ನಂ.123/1ರ ಸರಕಾರಿ ಜಾಗದಲ್ಲಿ ರೇಣುಕಾ ಕೋಂ ವಿಶ್ವನಾಥ ಎಂಬವರು ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡವನ್ನು ಕಡಬ ತಹಶೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ನ.13ರಂದು ತೆರವು ಮಾಡಲಾಗಿತ್ತು. ಅದೇ ಸ್ಥಳದಲ್ಲಿ ಪುನ: ಕಟ್ಟಡವನ್ನು ನಿರ್ಮಿಸುತ್ತಿರುವುದಾಗಿ ದೂರುಗಳು ಬಂದ ಹಿನ್ನೆಲೆಯಲ್ಲಿ ಡಿ.6ರಂದು ಗ್ರಾಮ ಆಡಳಿತಾಧಿಕಾರಿ ಸಿದ್ದಲಿಂಗ ಜಂಗಮಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ರೇಣುಕಾರವರ ತಂದೆ ಮುತ್ತುಸ್ವಾಮಿ ಮತ್ತು ಇತರರು ಹಲ್ಲೆ ಮಾಡಿ ಮನೆ ನಿರ್ಮಾಣವನ್ನು ಮುಂದುವರೆಸಿರುತ್ತಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಗಾಯಗೊಂಡ ಗ್ರಾಮ ಆಡಳಿತಾಧಿಕಾರಿ ಚಿಕಿತ್ಸೆಗಾಗಿ ಉಪ್ಪಿನಂಗಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರಕಾರಿ ಕರ್ತವ್ಯದಲ್ಲಿದ್ದ ನೌಕರನ ಮೇಲೆ ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕಡಬ ತಹಶೀಲ್ದಾರ್ ಅವರು ದ.ಕ.ಜಿಲ್ಲಾಧಿಕಾರಿಯವರಿಗೆ, ಪುತ್ತೂರು ಉಪ ಸಹಾಯಕ ಆಯುಕ್ತರಿಗೆ ಹಾಗೂ ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಣಾಧಿಕಾರಿಯವರಿಗೆ ಪತ್ರ ಬರೆದಿದ್ದಾರೆ.

Related posts

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಾಧುರ್ಯ ಜಿ ರಾಜ್ಯಕ್ಕೆ ಪ್ರಥಮ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya
error: Content is protected !!