ವೇಣೂರು: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ ಹಾಗೂ ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮವು ಡಿ.8ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಶ್ರೀ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಗೀರೀಶ್ ಕೆ.ಹೆಚ್.ವಹಿಸಿದ್ದರು.
ವೇದಿಕೆಯಲ್ಲಿ ಮಂಗಳೂರು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ಸಂಸ್ಥಾಪಕ ಅನಿಲ್ ದಾಸ್, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಮಂಗಳೂರು ಜಿಲ್ಲಾ ಖಾಸಾಗಿ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ವಿಠಲ ಅಬುರ, ಕುಕ್ಕೇಡಿ ಗ್ರಾ.ಪಂ ಅಧ್ಯಕ್ಷೆ ಅನಿತಾ, ಕುಂಭಶ್ರೀ ವೈಭವದ ಗೌರವಾಧ್ಯಕ್ಷರಾದ ಹರೀಶ್ ಪೊಕ್ಕಿ, ಗುರುಪ್ರಕಾಶ್ ಕಕ್ಕೆಪದವು, ಅಧ್ಯಕ್ಷ ಅಶ್ವಿತ್ ಕುಲಾಲ್, ಕುಂಭಶ್ರೀ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಹಾಗೂ ಪ್ರಾಂಶುಪಾಲ ಓಮನಾ, ಉಪ ಪ್ರಾಂಶುಪಾಲರಾದ ವಿನಯ ಎಂ.ಎಸ್, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು, ಶಿಕ್ಷಕ ರಕ್ಷಕ ಸಂಘದವರು, ಕುಂಭಶ್ರೀ ವೈಭವ ಸಮಿತಿ ಸದಸ್ಯರು, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂಭಶ್ರೀ ವಿದ್ಯಾಸಂಸ್ಥೆ ಸಂಚಾಲಕರು ಸಂಸ್ಥಾಪಕರಾದ ಅಶ್ವಿತ್ ಕುಲಾಲ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.