29.7 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

ಉಜಿರೆ: “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ರೇಂಜರ್ ಲೀಡರ್ ಆಗಿರುವ ಶ್ರೀಮತಿ ಅಂಕಿತ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ 3 ರಿಂದ 6 ವರ್ಷದ ವಿದ್ಯಾರ್ಥಿಗಳ ‘ಬನ್ನಿ’ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನೊರ್ವ ಅತಿಥಿಗಳಾಗಿ ಬೆಳ್ತಂಗಡಿಯ ಸ್ಥಳೀಯ ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಹಿತನುಡಿಗಳನ್ನಾಡಿ ಅಭಿನಯ ಗೀತೆ ಕಲಿಸಿದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ರವೀನ ಹಾಗೂ ಮಮತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸುವಿನ ವಂದಿಸಿದರು.

Related posts

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!