ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಡಿ.8 ರಂದು ಆಯೋಜಿಸಲಾಗಿತ್ತು.
ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು. ಡಾ. ಮಿಪ್ರಾ ದಂತವೈದ್ಯರು, ಡಾ. ಮಹಮ್ಮದ್ ಶಾಹೀಲ್ ವೈದ್ಯಕೀಯ ಅಧಿಕಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಹಾಗೂ ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು. 150ಕ್ಕೂ ಅಧಿಕ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.
ಯೆನೆಪೋಯ ಸಂಸ್ಥೆಯ ಸಮಾಜ ಸೇವಕಿ ಶ್ರೀಮತಿ ಸ್ವೀಕೃತರವರು, ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಯು.ಸಿ.ಪೌಲೋಸ್ ರವರು, ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಸಂಸ್ಥೆಯ ವೈದ್ಯರಾದ ಡಾ.ಶಿವಾನಂದಸ್ವಾಮಿಯವರು, ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ಸಿಂಧು ವಿ.ಎಂ.ಯವರು ಕಾರ್ಯಕ್ರಮ ನಿರೂಪಿಸಿದರು.