ಕೊಯ್ಯೂರು : “ಒಂದು ವ್ಯವಸ್ಥೆಯಲ್ಲಿ ನಾಯಕನ ಗುಣಲಕ್ಷಣಗಳು ಮತ್ತು ಸಾಮರ್ಥ್ಯ ಅತ್ಯಂತ ನಿರ್ಣಾಯಕ ಪಾತ್ರ ವಹಿಸುತ್ತವೆ. ಬಹುಮುಖ ಪ್ರತಿಭೆಯ ಶಿಕ್ಷಕರು ಸಂಸ್ಥೆಯ ಆಸ್ತಿ ಮತ್ತು ಶಕ್ತಿ ” ಎಂಬುದಾಗಿ ನಡ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಅಭಿಪ್ರಾಯಪಟ್ಟರು.
ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರತಿಭಾಪುರಸ್ಕಾರ ಸಮಾರಂಭದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಸ್ ಕೆ ಡಿ ಆರ್ ಡಿ ಪಿ (ರಿ.) ಧರ್ಮಸ್ಥಳ ಇದರ ಉಡುಪಿ ಪ್ರಾದೇಶಿಕ ಕಛೇರಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡರವರು “ಪ್ರತಿಯೊಬ್ಬರಲ್ಲಿಯೂ ಸಾಮರ್ಥ್ಯ ಇದ್ದೇ ಇರುತ್ತದೆ. ಆದರೆ ಅದರ ಅರಿವು ಅವರಗಿರುವುದಿಲ್ಲ. ಸೂಕ್ತ ವೇದಿಕೆ ಸಿಕ್ಕಾಗ ಅವರ ಪ್ರತಿಭೆ ಅನಾವರಣ ಗೊಳ್ಳುತ್ತದೆ “ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ಯಾಕ್ಸ್ ಕೊಯ್ಯೂರು ನಿರ್ದೇಶಕ ಅಶೋಕ್ ಕುಮಾರ್ ಅಗ್ರಸಾಲೆ, ಕೆಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಬಾಲಕೃಷ್ಣ ಬೇರಿಕೆ, ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ವಿಜಯ ಕುಮಾರ್ ಎಂ. ವಿದ್ಯಾರ್ಥಿಗಳ ಸಾಧನೆ ಮತ್ತು ಕಾರ್ಯಕ್ರಮದ ಯಶಸ್ಸಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಯ್ಯೂರು ಗ್ರಾಮಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕೊಯ್ಯೂರು ಗ್ರಾಮಪಂಚಾಯತ್ ಉಪಾಧ್ಯಕ್ಷ ಹರೀಶ್ ಬಜಿಲ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಲೋಕೇಶ್ ಪಾಂಬೇಲು, ಶ್ರೀಮತಿ ಹೇಮಾವತಿ ಕಡಮ್ಮಾಜೆ, ಪ್ಯಾಕ್ಸ್ ಕೊಯ್ಯೂರು ಅಧ್ಯಕ್ಷ ನವೀನ್ ಕುಮಾರ್ ವಾದ್ಯಕೋಡಿ, ಕಾರ್ಯನಿರ್ವಾಹಣಾಧಿಕಾರಿ ಅನಂತ ಕೃಷ್ಣ ಭಟ್, ಕೊಯ್ಯೂರು ಪ್ರೌಢಶಾಲೆಯ ಮುಖ್ಯಶಿಕ್ಷಕ ರಾಧಾಕೃಷ್ಣ ತಚ್ಛಮೆ, ಹಿರಿಯ ಶಿಕ್ಷಕಿ ಶ್ರೀಮತಿ ಬೇಬಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ದಾಮೋದರ ಗೌಡ ಬೆರ್ಕೆ,ನಿವೃತ್ತ ಶಿಕ್ಷಕ ರಮೇಶ್ ಆಚಾರ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃತಿಕ್, ಕಾರ್ಯದರ್ಶಿ ಕುಮಾರಿ ಪ್ರಜ್ಞಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಅನನ್ಯ ಸಾಧನೆ ಗೈದ ನಡ ಕಾಲೇಜು ಪ್ರಾಂಶುಪಾಲರಾದ ಚಂದ್ರಶೇಖರ್ ಮತ್ತು ಸಾಮಾಜಿಕ ಸೇವೆಯ ಸಾಧನೆ ಗಾಗಿ, ಎಸ್ ಕೆ ಡಿ ಆರ್ ಡಿ ಪಿ (ರಿ.) ಧರ್ಮಸ್ಥಳ -ಇದರ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಅಲ್ಲದೇ ಸಂಸ್ಥೆಯಲ್ಲಿ ದ್ವಿತೀಯ ಪಿ ಯು ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾದ ಆಯಿಷಾತು ರಾಬಿಹ, ಮೇಘಶ್ರೀ, ಹಾಯಫಾತಿಮಾ, ಅಖಿಲಾ, ವಿಕಾಸ್ -ಇವರುಗಳನ್ನು ಅಭಿನಂದಿ ಸಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಮೋಹನ ಗೌಡ ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ವರದಿ ವಾಚಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನದ ಪಟ್ಟಿ, ಅರ್ಥ ಶಾಸ್ತ್ರ ಉಪನ್ಯಾಸಕಿ
ಕು. ತೃಪ್ತಿ ಶೈಕ್ಷಣಿಕ ಸಾಧಕರ ಪಟ್ಟಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ಕ್ರೀಡಾ ಸಾಧಕರ ಪಟ್ಟಿ ವಾಚಿಸಿದರು. ಸಮಾಜಶಾಸ್ತ್ರ ಉಪನ್ಯಾಸಕ ಮಾಯಿಲ ಸಹಕರಿಸಿದರು. ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ನಿಶ್ಮಿತಾ, ರoಝೀನಾ, ವಿನಯ ಪ್ರಾರ್ಥನೆ ಗೈದರು. ರಾಜ್ಯಶಾಸ್ತ್ರ ಉಪನ್ಯಾಸಕ ಸಂತೋಷ್ ಕುಮಾರ್ ಧನ್ಯವಾದ ಗೈದರು. ಇತಿಹಾಸ ಉಪನ್ಯಾಸಕ ಶ್ರೀ ಲಕ್ಷ್ಮಣ ಗೌಡ ಕಾರ್ಯಕ್ರಮ ನಿರ್ವಹಿಸಿದರು. ನಡ ಸರ್ಕಾರಿ ಪದವಿಪೂರ್ವ ಕಾಲೇಜ್,ಮಾಸ್ಟರ್ ಕೋಚಿಂಗ್ ಸೆಂಟರ್, ಕೊಯ್ಯೂರು ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳ ಕೂಡುವಿಕೆ ಯೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.