19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

ಬೆಳ್ತಂಗಡಿ:ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೆಸಿ ಸಪ್ತಾಹ ಕಾರ್ಯಕ್ರಮವು ಡಿ.14 ರಿಂದ 20 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಲಿದೆ ಎಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಹೇಳಿದರು.

ಅವರು ಡಿ.9 ರಂದು ಬೆಳ್ತಂಗಡಿ ಜೆಸಿ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಳೆದ 46 ವರ್ಷಗಳಿಂದ ಹಲವಾರು ಅಧ್ಯಕ್ಷರುಗಳು ಜೆಸಿ ಸಂಸ್ಥೆಯನ್ನು ಮುನ್ನಡೆಸಿ ಅದ್ದೂರಿ ಜೆಸಿ ಸಪ್ತಾಹವನ್ನು ಬೆಳ್ತಂಗಡಿಯ ಹಬ್ಬವಾಗಿ ಆಚರಿಸುತ್ತ ಬಂದಿರುತ್ತಾರೆ.ಈ ವರ್ಷ ವಿನೂತನವಾಗಿ ಸಪ್ತಾಹವನ್ನು ಆಚರಿಸುತ್ತಿದ್ದು ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸುತ್ತಿದ್ದಾರೆ. ವಿವಿಧ ಕ್ಷೇತ್ರದ ಸಾಧಕರಿಗೆ ಸಾಧನಾಶ್ರೀ, ಸಮಾಜ ಸೇವೆ ನೀಡುತ್ತಿರುವ 7 ಸಂಘ ಸಂಸ್ಥೆಗಳಿಗೆ ಸೇವಾಶ್ರೀ ಪುರಸ್ಕಾರ ನೀಡಿ ಗೌರವುಸಲಾಗುವುದು. ಜೊತೆಗೆ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಗೌರವ ಸನ್ಮಾನ ನಡೆಯಲಿದೆ. ತಾಲೂಕಿನ ಅದ್ಭುತ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಯುವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದರು.

ಜೆಸಿ ಸಪ್ತಾಹದ ಸಂಯೋಜಕಿ ಹೇಮಾವತಿ ಮಾತನಾಡಿ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೇರವೇರಿಸಲಿದ್ದಾರೆ. ಹಲವಾರು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿದ್ದು ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ. ರಾಜ್ಯಮಟ್ಟದ ಡ್ಯಾನ್ಸ್ ಸ್ಪರ್ದೆ,ಆದರ್ಶ ದಂಪತಿ, ಫ್ಯಾಶನ್ ಶೋ,ಸ್ಟಾರ್ ಸಿಂಗರ್,ಕಥೆ ಎಡ್ಡೆ ಉಂಡು,ಎಕ್ಸೆಲ್ ಸಂಭ್ರಮ, ನೃತ್ಯ ಸಂಗಮ ನಡೆಯಲಿದೆ. ಜೊತೆಗೆ ಹಲವಾರು ಒಳಂಗಣ ಕ್ರೀಡಾಪಟುಗಳು ನಡೆಯುತ್ತದೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಪೂರ್ವಾಧ್ಯಕ್ಷರಾದ ಚಿದಾನಂದ ಇಡ್ಯ, ನಾರಾಯಣ ಶೆಟ್ಟಿ, ಸಪ್ತಾಹದ ಸಹ ಸಂಯೋಜಕ ರಕ್ಷಿತ್ ಅಂಡಿಂಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya
error: Content is protected !!