ತೋಟತ್ತಾಡಿ:ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ತೋಟತ್ತಾಡಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಅಯ್ಯಪ್ಪ ಸ್ವಾಮಿ ದೀಪೋತ್ಸವ ಕಾರ್ಯಕ್ರಮವು ಡಿ.18ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಎಂ.ಎನ್ ಹಾಗೂ ಸಮಿತಿ ಸದಸ್ಯರು ಮತ್ತು ಪೂಜಾ ಸಮಿತಿಯ ಅಧ್ಯಕ್ಷ ಸುರೇಶ್ ಪರ್ಲಾ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.