September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ.

ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ. ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.

ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.

Related posts

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!