22.5 C
ಪುತ್ತೂರು, ಬೆಳ್ತಂಗಡಿ
December 18, 2024
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಸುಲಿಗೆ ಮಾಡಿಕೊಂಡು ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು 24 ಗಂಟೆಯೊಳಗೆ ಬೆಳ್ತಂಗಡಿ ಪೊಲೀಸರು ಬಂಧಿಸಿ, ಸುಲಿಗೆ ಮಾಡಿಕೊಂಡು ಹೋಗಿದ್ದ ಚಿನ್ನದ ಕರಿಮಣಿ ಸರವನ್ನು ವಶಪಡಿಸಿಕೊಳ್ಳಲಾಗಿದೆ.‌

ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್.ಎಮ್ ತಂಡದ ಸಿಬ್ಬಂದಿಗಳು ಕೊಯ್ಯೂರು ಗ್ರಾಮದ ಆದ್ರೂಪೆರಲ್ ಬಸ್ ನಿಲ್ದಾಣದಲ್ಲಿ ಡಿ.10 ರಂದು ಬೆಳಗ್ಗೆ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಆರೋಪಿಗೆ ಬೆಳ್ತಂಗಡಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ವಿವಿರ: ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋಧರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತ ಹಿಂದಿನಿಂದ ಓಡಿ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಸುಲಿಗೆ ಮಾಡಿಕೊಂಡು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ. ಗಾಯಗೊಂಡ ರಾಜೀವಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಸುಲಿಗೆ ಮಾಡಿರುವ ಬಗ್ಗೆ ಡಿ.9 ರಂದು 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು.

ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ
ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಯಲ್ಲಪ್ಪ ಹೆಚ್.ಎಮ್,ಎಎಸ್ಐ ಶ್ರೀ ಕೆ.ಜೆ. ತಿಲಕ್,ಬೆನ್ನಿಚ್ಚನ್,ಜಗದೀಶ್‌ , ಗಂಗಾಧರ, ಚರಣ್ ರಾಜ್, ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ಆರೋಪಿಯ ಪತ್ತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಉಜಿರೆ ಗಾಂಧಿನಗರ ಅಂಗನವಾಡಿ ಶಾಲೆಗೆ ಎಸ್.ಕೆ ಸದ್ವಿಕ್ ಹುಟ್ಟುಹಬ್ಬದ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರ ಕೊಡುಗೆ

Suddi Udaya

ನಿಕಟ ಪೂರ್ವ ರಾಜಾಧ್ಯಕ್ಷರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಶ್ರೀ ರಾಮಸ್ವಾಮಿ(ವಿಸಿಎನ್ಆರ್ ಗ್ರೂಪ್) ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!