ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಇದರ 25ನೇ ವರ್ಷದ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ಡಿ. 10 ರಂದು ನಡೆಯಿತು.
ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಉದ್ಘಾಟಿಸಿದರು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಅಧ್ಯಕ್ಷತೆಯನ್ನು ವಹಿಸಿದರು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ಎಸ್ ವಿ ಎಸ್ ಕಾಲೇಜು ಪ್ರಾಂಶುಪಾಲರಾದ ಗಂಗಾಧರ ಆಳ್ವ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷರಾದ ಪದ್ಮಗೌಡ, ತೆರಿಗೆ ಸಲಹೆಗಾರ ಆನಂದ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ, ಆಡಳಿತ ಅಧಿಕಾರಿ ಪ್ರಸಾದ್, ಶಿಕ್ಷಕ ರಕ್ಷಕರ ಸಂಘದ ಅಧ್ಯಕ್ಷ ಮೋಹನ್ ಗೌಡ, ಶಾಲಾ ನಾಯಕಿ ಮಾನ್ಯ ಉಪಸ್ಥಿತರಿದ್ದರು .
ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಸ್ವಾಗತಿಸಿ, ಶಾಲಾ ಮುಖ್ಯೋಪಾಧ್ಯಾಯನಿ ಸುಹಾಸಿನಿ ಧನ್ಯವಾದವಿತ್ತರು.