19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

ಪುತ್ತೂರು: ಸೇವಾಭಾರತಿ ಸೇವಾಧಾಮ ಇದರ ಆಶ್ರಯದಲ್ಲಿ ಆದರ್ಶ ಆಸ್ಪತ್ರೆ, ಪುತ್ತೂರು ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು ಇವರ ಸಹಯೋಗದಲ್ಲಿ ಎಂ. ಸಂಜೀವ ಶೆಟ್ಟಿ, ಜವಳಿ ವ್ಯಾಪಾರಸ್ಥರು ಪುತ್ತೂರು ಮತ್ತು ಸೋಜಾ ಮೆಟಲ್ ಮಾರ್ಟ್, ಪುತ್ತೂರು ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 27ನೇ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜನಸಾಮಾನ್ಯರಿಗೆ ಬೆನ್ನುಹುರಿ ಅಪಘಾತದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರನ್ನು ಮುಖ್ಯವಾಹಿನಿಗೆ ಕರೆತರುವ ಉದ್ದೇಶದಿಂದ ಡಿಸೆಂಬರ್ 09 ರಂದು ಪುತ್ತೂರು ಆದರ್ಶ ಆಸ್ಪತ್ರೆಯಲ್ಲಿ ಗಾಲಿಕುರ್ಚಿ ಜಾಥಾವನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹಸಿರು ನಿಶಾನೆಯನ್ನು ತೋರಿಸಿ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮಹಾಲಿಂಗೇಶ್ವರ ದೇವಸ್ಥಾನದಿಂದ ಪ್ರಾರಂಭಿಸಿ ಮೈ ದೇ ದೇವುಸ್ ಚರ್ಚ್ ಮುಂಭಾಗದಿಂದ ಎಪಿಎಂಸಿ ರಸ್ತೆ ಮುಖಾಂತರ ಆದರ್ಶ ಆಸ್ಪತ್ರೆಯ ತನಕ ಜಾಥಾವನ್ನು ಮಾಡಲಾಯಿತು. ಒಟ್ಟು 15 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು, ಅರೈಕೆದಾರರು, ಪೊಲೀಸ್ ಸಿಬ್ಬಂದಿಗಳು, ಸೇವಾಭಾರತಿ ಸಿಬ್ಬಂದಿವರ್ಗದವರು, ಪ್ರಗತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

Related posts

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಬಾವಿ ಒಳಗೆ ನೀಲಿ ಬಣ್ಣ ನೀರು ಸುತ್ತಮುತ್ತ ಕೆಂಪು ನೀರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 61 ಮತದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ನ.13: ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ ಕಾರ್ಯಕ್ರಮ

Suddi Udaya
error: Content is protected !!