19.2 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

ಕೊಯ್ಯೂರು : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಕೊಯ್ಯೂರಿನಲ್ಲಿ ನಡೆದಿದೆ.

ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋದರ್ ಭಟ್ ಅವರ ಪತ್ನಿ ರಾಜೀವಿ(50) ಎಂಬವರು ಡಿ.9 ರಂದು ಮಧ್ಯಾಹ್ನ 2:35 ರ ಸುಮಾರಿಗೆ ಬೆಳ್ತಂಗಡಿಗೆ ಹೋಗಿ ವಾಪಸ್ ಮನೆಗೆ ಕೊಯ್ಯೂರು ಗ್ರಾಮದ ಪಾಂಬೇಲ್ ಕ್ರಾಸ್ ನಲ್ಲಿ ಇಳಿದು ಕೋರಿಯಾರ್ ಮನೆಗೆ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಆರೋಪಿ ಕೊಯ್ಯೂರು ಗ್ರಾಮದ ಗಿರಿಗುಡ್ಡೆ(ಜಾಲ್) ,ಡೆಂಬುಗ ನಿವಾಸಿ ಕೊರಗಪ್ಪ ಗೌಡರ ಮಗ ಉಮೇಶ್ ಗೌಡ(38) ಎಂಬಾತ ಹಿಂದಿನಿಂದ ಬಂದು ಮಹಿಳೆಯ ಕುತ್ತಿಗೆಯನ್ನು ಬಿಗಿಯಾಗಿ ಹಿಡಿದು ಬೊಬ್ಬೆ ಹಾಕಬೇಡಿ ಎಂದು ಬೆದರಿಸಿ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರವನ್ನು ಎಳೆದಿದ್ದು ಈ ವೇಳೆ ಕೈಯಲ್ಲಿ ಗಟ್ಟಿಯಾಗಿ ಹಿಡಿದು ಬೊಬ್ಬೆ ಹಾಕಿದಾಗ ಕರಿಮಣಿ ಎಳೆದ ರಭಸಕ್ಕೆ ಕುತ್ತಿಗೆ ,ಎದೆಗೆ ಗಾಯವಾಗಿದ್ದು ಕರಿಮಣಿ ಎರಡು ಭಾಗವಾಗಿದೆ ಒಂದು ತುಂಡು ಕರಿಮಣಿಯನ್ನು ಆರೋಪಿ ಉಮೇಶ್ ಗೌಡ ಹಿಡಿದು ಗುಡ್ಡದ ಕಡೆ ಓಡಿ ಪರಾರಿಯಾಗಿದ್ದಾನೆ.

ಗಾಯಗೊಂಡ ರಾಜೀವಿ ಮಹಿಳೆ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮಾರು ಒಂದು ಲಕ್ಷ ಮೌಲ್ಯದ 16 ಗ್ರಾಂ ಚಿನ್ನ ಕಳ್ಳತನ ಮಾಡಿರುವ ಬಗ್ಗೆ 309(6)BNS ಅಡಿಯಲ್ಲಿ ಆರೋಪಿ ಉಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು. ಬೆಳ್ತಂಗಡಿ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ವಿಶೇಷ ತಂಡ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಪುಂಜಾಲಕಟ್ಟೆ ಕೆಪಿಎಸ್ ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya
error: Content is protected !!