24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ ವತಿಯಿಂದ ರೂ.4,೦೦,೦೦೦/-(ನಾಲ್ಕು ಲಕ್ಷ) ಮೌಲ್ಯದ ಔಷಧಿಯನ್ನು ಡಿ. ವೀರೇಂದ್ರ ಹೆಗ್ಗಡೆಯವರ ಆದೇಶದಂತೆ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ನೀಡಲಾಗಿದೆ.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ (ರಿ.) ಮೂಲಕ ಆಸ್ಪತ್ರೆಯ ವೈದ್ಯೆ ಡಾ|| ಮಂಜು ಇವರಿಗೆ , ಮೆಡಿಕಲ್ ಟ್ರಸ್ಟ್ನ ಕಾರ್ಯದರ್ಶಿ ಶಿಶುಪಾಲ್ ಪೂವಣಿಯವರು ಔಷಧಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹಸ್ತಾಂತರಿಸಿದರು. ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹಾಗೂ ಸ್ಥಳೀಯ ಜನರಿಗೆ ಇದರಿಂದ ಹೆಚ್ಚಿನ ಪ್ರಯೋಜನವಾಗುವುದೆಂದು ಡಾ| ಮಂಜುರವರು ತಿಳಿಸಿದ್ದಾರೆ.

Related posts

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಆ.31: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!