23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

ಮೂಡುಬಿದಿರೆ :ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು.


ಆಳ್ವಾಸ್ ಶಿಕ್ಷಣ ಪ್ರತಿ ದಿನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ. 15ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’30ನೇ ವರ್ಷದ ‘ಅಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಡಿ.11ರಂದು ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.


ಮುಸ್ಸಂಜೆಯಲ್ಲಿ ಪ್ರಕೃತಿ ರಮಣೀಯ ವಿಶಾಲ ಸಭಾಂಗಣದಲ್ಲಿ ತುಂಬಿದ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಕಾರ್ಯಕ್ರಮ. ಸಾಹಿತ್ಯ ಮತ್ತು ಸಂಸ್ಕೃತಿ ಜೊತೆಯಾಗಿ ಮೇಳೈಸಿದ ಕಾರ್ಯಕ್ರಮ. ನಮ್ಮ ಸಾಂಸ್ಕೃತಿಕ ಸಂಪತ್ತು ಹೆಚ್ಚಾದಾಗ ಮನಸ್ಸು ಅರಳುತ್ತದೆ ಎಲ್ಲರಿಗೂ ಸಂತೋಷ ನೀಡುವ ವ್ಯಕ್ತಿತ್ವವೇ ಆಳ್ವ ಎಂದು ಬಣ್ಣಿಸಿದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ ಎಂ.ಜಿ.ಆರ್. ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಮಾತನಾಡಿ, ಆಳ್ವರ ದೃಷ್ಟಿಯೇ ಕ್ರಿಯೆಯಾಗಿ ಇಲ್ಲಿ ರೂಪುಗೊಂಡಿದೆ ಎಂದರು. ನಾನು ಅವರನ್ನು ನಾಲ್ಕು ದಶಕಗಳಿಂದ ಕಂಡಿದ್ದೇನೆ. ಅವರ ಪ್ರಯೋಗ ಇಂದು ನಾಡಿಗೆ ಕೊಡುಗೆ ನೀಡಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಅಂದು ಊರಿಗೆ ಸೀಮಿತವಾಗಿದ್ದ ವಿರಾಸತ್ ಇಂದು ರಾಷ್ಟ್ರೀಯ ಹಬ್ಬವಾಗಿದೆ. ಇಂದು ದೇಶದಲ್ಲಿ ವಿದ್ಯಾರ್ಥಿಗಳ ಸಂಖ್ಯೆ 52 ಕೋಟಿ ಇದೆ. ಯುವ ಸಂಪತ್ತು ಬಗ್ಗೆ ನಾವು ಯೋಚಿಸಬೇಕು ಎಂದರು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿ ಕ್ರೀಡೆ, ಸಾಂಸ್ಕೃತಿಕ ತರಬೇತಿ ನೀಡುತ್ತಿದ್ದೇವೆ. ಮಂಗಳೂರು ವಿಶ್ವವಿದ್ಯಾನಿಲಯದ 49 ಅಥ್ಲೆಟಿಕ್ಸ್ ದಾಖಲೆ ಆಳ್ವಾಸ್ ಹೆಸರಿನಲ್ಲಿದೆ ಎಂದು ಸಂತಸ ಹಂಚಿಕೊಂಡರು. ನಮ್ಮ ಸಂಸ್ಥೆಯಲ್ಲಿ ಪ್ರತಿವರ್ಷ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಾಂಸ್ಕೃತಿಕ ತರಬೇತಿ ಪಡೆದು, ರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮ ನೀಡುತ್ತಿದ್ದಾರೆ ಎಂದರು.

.
ಆರಂಭದಲ್ಲಿ ಗಿರಿಧರ್ ಅವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಮೂಡಿದ ಬೆಳಕಾಗಿ ಬಾ ಹಾಗೂ ಡಾ.ಎನ್.ಕೆ. ಪದ್ಮನಾಭ ವಿರಚಿತ ?ಪರಹಿತ ಬಯಸೋ ಪ್ರಾರ್ಥನೆಯನ್ನು ಹಾಡಲಾಯಿತು.

ಆಳ್ವಾಸ್ ವಿರಾಸತ್ 30ನೇ ವರ್ಷದ ಹಿನ್ನೆಲೆಯಲ್ಲಿ ಅಂಚೆ ಇಲಾಖೆಯು ಹೊರತಂದಿರುವ ಆಳ್ವಾಸ್ ಸಾಂಸ್ಕೃತಿಕ ವೈಭವ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ದಂಪತಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಪ್ರಧಾನ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ, ಮುಂಬಯಿ ಹೇರಂಭಾ ಇಂಡಸ್ಟ್ರೀಸ್ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಕಟೀಲು ದುರ್ಗಾಪರಮೇಶ್ವರಿ ದೇವಾಲಯದ ಆನುವಂಶಿಕ ಮೊಕ್ತೇಸರ ಲಕ್ಷ್ಮೀ ನಾರಾಯಣ ಅಸ್ರಣ್ಣ, ಶಾರದಾ ಶಿಕ್ಷಣ ಸಮೂಹ ಸಂಸ್ಥೆ ಅಧ್ಯಕ್ಷ ಎಂ.ಬಿ.ಪುರಾಣಿಕ, ಬರೋಡ ಶಶಿ ಕೇಟರಿಂಗ್ ಸರ್ವೀಸಸ್ ಆಡಳಿತ ನಿರ್ದೇಶಕ ಶಶಿಧರ ಶೆಟ್ಟಿ, ಬೆಂಗಳೂರು ಕೆ.ಎಲ್.ಎನ್. ಎಂಜಿನಿಯರಿಂಗ್ ಆಡಳಿತ ನಿರ್ದೇಶಕ ಪ್ರಸನ್ನ ಕುಮಾರ್ ಶೆಟ್ಟಿ,, ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ ನ ಎಂ.ರವೀಂದ್ರನಾಥ ಆಳ್ವ, ಕಲ್ಕೂರ ಪ್ರತಿ?ನದ ಅಧ್ಯಕ್ಷ ಪ್ರದೀಪ್ ಕಲ್ಕೂರ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, , ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ರಾಧಾ, ಮೂಡುಬಿದಿರೆ ಧನಲಕ್ಷ್ಮೀ ಕ್ಯಾಶ್ಯೂಸ್ ಆಡಳಿತ ನಿರ್ದೇಶಕ ಕೆ. ಶ್ರೀಪತಿ ಭಟ್, ಕೆನರಾ ಬ್ಯಾಂಕಿನ ಸುಧಾಕರ್ ಕೊಠಾರಿ, ಪ್ರಮುಖವಾದ ಜಯಶ್ರೀ ಅಮರನಾಥ ಶೆಟ್ಟಿ, ಹರಿಕೃ? ಪುನರೂರು, ಭುವನಾಭಿರಾಮ ಉಡುಪ, ತಿಮ್ಮಯ್ಯ ಶೆಟ್ಟಿ, ರಾಮಯ್ಯ ಶೆಟ್ಟಿ, ಪತ್ರಕರ್ತ ಶ್ರೀನಿವಾಸ ಇಂದಾಜೆ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ., ಮಂಗಳೂರು ಭಾರತ್ ಇನ್‌ಫ್ರಾಟೆಕ್‌ನ ಮುಸ್ತಾಫ ಎಸ್.ಎಂ, ಮೂಡುಬಿದಿರೆ ಬಿಮಲ್ ಕನ್‌ಸ್ಟ್ರಕ್ಷನ್ ನಪ್ರವೀಣ್ ಕುಮಾರ್ ಉಪಸ್ಥಿತರಿದ್ದರು..

ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಡೀನ್ ಕೆ. ವೇಣುಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಮೇಳಗಳು:
ಅನ್ವೇಷಣಾತ್ಮಕ ಶತಾಯುಷಿ ಕೃಷಿಕ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಕೃಷಿಮೇಳ, ಆಹಾರ ಮೇಳ, ಫಲಪುಷ್ಪ ಮೇಳ, ಕರಕುಶಲ ಮತ್ತು ಪ್ರಾಚ್ಯವಸ್ತು ಪ್ರದರ್ಶನ ಮೇಳ, ಚಿತ್ರಕಲಾ ಮೇಳ, ಕಲಾಕೃತಿ ಪ್ರದರ್ಶನ, ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಮಹಾಮೇಳಗಳೂ ಉದ್ಘಾಟನೆಗೊಂಡಿದ್ದು, ಡಿ.15ರ ವರೆಗೆ ನಡೆಯಲಿವೆ.

Related posts

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾದರಿಯಾದ ಅಳದಂಗಡಿಯ ಹೇಮಚಂದ್ರ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವ: ವಿಜೃಂಭಣೆಯಿಂದ ನಡೆದ ದೇವರ ದರ್ಶನ ಬಲಿ

Suddi Udaya
error: Content is protected !!