28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೆಳಗಾವಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ರಸ್ತೆ , ವಿದ್ಯುತ್ ಇಲ್ಲದೆ ಆದಿವಾಸಿಗಳು ವಾಸಿಸುತ್ತಿದ್ದಾರೆ. ಇಂದಿಗೂ ಚಿಮಿಣಿ ದೀಪದಲ್ಲಿ ಜೀವಿಸುಂತಾಗಿದೆ. ರಸ್ತೆ ಇಲ್ಲದೆ ಹತ್ತಾರು ಕಿಮೀ ನಡೆದುಕೊಂಡೇ ನದಿ , ಹಳ್ಳ , ತೊರೆಗಳನ್ನು ದಾಟಿ ಹೋಗಬೇಕಾಗಿದೆ ಎಂದು ಸಮಸ್ಯೆಯ ಗಂಭೀರತೆಯನ್ನು ಮುಖ್ಯಮಂತ್ರಿಗಳ ಗಮನ ಸೆಳೆದರು. ಜೊತೆಗೆ ಇತರ ಆದಿವಾಸಿ ಕಾಲನಿಗಳೂ ಮೂಲಭೂತ ಸೌಕರ್ಯ ವಂಚಿತವಾಗಿದೆ. ಇದಕ್ಕಾಗಿ ವಿಶೇಷ ಅನುದಾನ ಬೆಳ್ತಂಗಡಿ ತಾಲೂಕಿಗೆ ಬಿಡುಗಡೆ ಮಾಡಲು ವಿನಂತಿಸಿದರು. ಇದೇ ಸಂದರ್ಭದಲ್ಲಿ ಈಗಾಗಲೇ ರಾಜ್ಯದ ಆದಿವಾಸಿ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿರುವ ಬಗ್ಗೆ ಅಭಿನಂದನೆ ಸಲ್ಲಿಸಿದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!