31.8 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

ಉಜಿರೆ: ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಮಹಿಳೆಯರ ಅಭಿವೃದ್ಧಿಯಾಗುತ್ತದೆ ಎಂದು ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಅಭಿಪ್ರಾಯಪಟ್ಟರು.

ಇಲ್ಲಿನ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಇಂದು (ಡಿ. 12) ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ದಿನದ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

“ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ, ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆ ಅವರ ಆಶಯದಂತೆ ಮಹಿಳೆಯರ ಆರ್ಥಿಕ ಸಬಲೀಕರಣದ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಇದರ ಜೊತೆಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಆಯೋಜಿಸುವ ಮೂಲಕ ಸಮಾಜದ ಹೆಣ್ಣುಮಕ್ಕಳು ಮುಂದೆ ಬರಲು ಅವಕಾಶ ಮಾಡಿಕೊಡುವ ಪ್ರಯತ್ನಕ್ಕೆ ನಮ್ಮ ಗ್ರಾಮ ಪಂಚಾಯತ್ ವತಿಯಿಂದ ಸಂಪೂರ್ಣ ಬೆಂಬಲವಿರುತ್ತದೆ” ಎಂದು ಅವರು ಹೇಳಿದರು.

ಮುಖ್ಯ ಅತಿಥಿ, ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ. ರವಿಶಂಕರ ಕೆ.ಆರ್. ಅವರು ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯ 2025-26 ನೇ ಸಾಲಿನ ಶೈಕ್ಷಣಿಕ ವರ್ಷದ ದಾಖಲಾತಿ ಕುರಿತ ಭಿತ್ತಿಪತ್ರ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, “ಇಂತಹ ಕಾರ್ಯಾಗಾರಗಳಿಂದ ಕಾರ್ಯಕ್ರಮದ ಫಲಾನುಭವಿಗಳಿಗಷ್ಟೇ ಅಲ್ಲದೆ, ಕಾರ್ಯಕ್ರಮ ನೀಡುವ ವಿದ್ಯಾರ್ಥಿಗಳಿಗೂ ಭವಿಷ್ಯದ ದೃಷ್ಟಿಯಿಂದ ಪ್ರಯೋಜನವಾಗುತ್ತದೆ” ಎಂದರು. ಗ್ರಾಮ ಪಂಚಾಯತ್ ಸಹಯೋಗಕ್ಕೆ ಸಂತಸ ವ್ಯಕ್ತಪಡಿಸಿದರು. ಟೀಮ್ ವರ್ಕ್ ಮತ್ತು ನಾಯಕತ್ವ ಕುರಿತು ಉಪನ್ಯಾಸ ನೀಡಿದರು.

ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ಅನುಶ್ರೀ ಹೆಗ್ಡೆ ಸ್ವಾಗತಿಸಿ, ಅನುಷಾ ಪಿ.ಜಿ. ವಂದಿಸಿದರು. ಲೋಹಿತ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಐಸ್ ಬ್ರೇಕ್, ಬ್ರೇನ್ ಸ್ಟಾರ್ಮಿಂಗ್ ಚಟುವಟಿಕೆಗಳು ಹಾಗೂ ಸಂದರ್ಶನ ಕುರಿತ ‘ಅನ್ ಲೀಶಿಂಗ್ ದಿ ಪವರ್ ಆಫ್ ಟೀಮ್ ವರ್ಕ್ ಆ್ಯಂಡ್ ಇಂಪ್ರೆಸ್ ಆ್ಯಂಡ್ ಸಕ್ಸೀಡ್: ದ ಇಂಟರ್ವ್ಯೂ ಪ್ಲೇ ಬುಕ್’ ವಿಚಾರ ಸಂಕಿರಣ ನಡೆಯಿತು.

Related posts

ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿನಲ್ಲಿ ಹೆಚ್.ಪಿ.ವಿ ವ್ಯಾಕ್ಸಿನ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಸಮಾಜ ಸೇವಕ, ರಾಜಕೇಸರಿ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ. ರವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಪರಿಶಿಷ್ಟ ಜಾತಿಯ ರೈತರಿಗೆ ತರಕಾರಿ ಬೀಜ ವಿತರಣೆ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಸಿಂಪನ ರಾಷ್ಟ್ರಮಟ್ಟದ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya
error: Content is protected !!