ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟ ಡಿ.10ರಂದು ನಡೆಯಿತು.
ಧರ್ಮಸ್ಥಳ ಡಿ ಎಂ ಸಿ ವಿಭಾಗದ ಇಂಜಿನಿಯರ್ ಯಶೋಧರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಾರ್ಷಿಕ ಕ್ರೀಡಾಕೂಟವನ್ನು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಿದರು . ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಸಮತೋಲನದಲ್ಲಿಡಲು ಪೂರಕವಾಗಿದೆ. “ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ. ಇದರ ಸದುಪಯೋಗವನ್ನು ವಿದ್ಯಾರ್ಥಿಗಳಾದ ನೀವೆಲ್ಲರೂ ಪಡೆದುಕೊಳ್ಳಬೇಕು” ಎಂದರು.