27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

ಮಡಂತ್ಯಾರು: ವಿದ್ಯಾರ್ಥಿಗಳು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಜೊತೆಗೆ ಶಿಸ್ತು, ಸಂಯಮವನ್ನುಗಳಿಸಲು ಸಾಧ್ಯ. ನಿರಂತರ ದೈಹಿಕ ವ್ಯಾಯಾಮದಿಂದ ಸದೃಢರಾಗಲು ಸಹಕಾರಿ ಎಂದು ಅಂತಾರಾಷ್ಟ್ರೀಯ ದೇಹದಾರ್ಢ್ಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ ವಿಜೇತ ಸತೀಶ್ ಕುದ್ರೋಳಿ ಹೇಳಿದರು .

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ 42ನೇ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡಾ ಸಾಧಕರು ಯಾವ ಸಂದರ್ಭದಲ್ಲಿ ಎಲ್ಲಿಯೂ ಬೇಕಾದರೂ ಗುರುತಿಸಲ್ಪಡುತ್ತಾರೆ. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯು ಸಂಸ್ಕಾರಯುತ ಶಿಕ್ಷಣ ನೀಡುವುದರ ಜೊತೆಗೆ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.ಈ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಾಧನೆಗೈದು ಸಂಸ್ಥೆಗೆ ಹಾಗೂ ಹೆತ್ತವರಿಗೆ ಕೀರ್ತಿಯನ್ನು ತರುವಂತಾಗಲಿ ಎಂದು ಅವರು ಶುಭ ಹಾರೈಸಿದರು.

ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ| ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆ ವಹಿಸಿದ್ದರು.ವೈಟ್ ಲಿಫ್ಟಿಂಗ್ ಅಂತಾರಾಷ್ಟ್ರೀಯ ಕ್ರೀಡಾಪಟು ಎಂ.ತಾರನಾಥ ಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು. ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೋರಸ್ , ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ವಂ|ದೀಪಕ್ ಲಿಯೋ ಡೇಸಾ , ಕಾಲೇಜು ಹಾಗೂ ಪ್ರೌಢ ಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಐವನ್ ಸಿಕ್ವೇರಾ, ವಿಲಿಯಂ ಪಿಂಟೋ , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜಶೇಖರ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಸೂರಜ್ ಚಾರ್ಲ್ಸ್ ನ್ಯೂನೆಸ್ ಸ್ವಾಗತಿಸಿ, ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಶಾಂತಿ ಮೇರಿ ಡಿಸೋಜ ವಂದಿಸಿದರು.


ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸತೀಶ್ ಕುದ್ರೋಳಿ ಹಾಗೂ ಎಂ.ತಾರನಾಥ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರೌಢಶಾಲಾ ಕ್ರೀಡಾ ಕಾರ್ಯದರ್ಶಿ ವಿನಯ್ ಪ್ರತಿಜ್ಞಾ ವಿಧಿ ಬೋಧಿಸಿದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡೆನ್ನಿಸ್ ಫೆರ್ನಾಂಡಿಸ್ ಹಾಗೂ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕ ಸಂಜಿತ್ ಕುಮಾರ್ ಶೆಟ್ಟಿ ನಿರ್ದೇಶನದಲ್ಲಿ ಸಂಸ್ಥೆಯ ಬೋಧಕ ಬೋಧಕರು ಸಹಕರಿಸಿದರು. ಉಪನ್ಯಾಸಕ ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!