26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮತ್ತು ಕಂಪಾನಿಯೋ ನೆಮ್ಮದಿ ವೆಲ್ನೆಸ್ ಸೆಂಟರ್ ಪುತ್ತೂರು ಇದರ ಆಶ್ರಯದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಶಿಬಿರವನ್ನು ಉದ್ಘಾಟಿಸಿ ಗ್ರಾಮದ ಜನತೆ ಈ ಥೆರಪಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಬಗ್ಗೆ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಮಾಲಕರು ನೆಮ್ಮದಿ ವೆಲ್ನ ಸೆಂಟರ್ ಪುತ್ತೂರು ಇವರು ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಸದಸ್ಯ ಸತೀಶ್ ಎಳ್ಳುಗದ್ದೆ, ಶ್ರೀಮತಿ ಪ್ರೇಮ ಗ್ರಾಮ ಪಂಚಾಯ್ ಬೆಳಾಲು, ತಾರಾನಾಥ್ ಸೇವಾ ನಿರತರು ಬೆಳಾಲು, ಗಂಗಾಧರ ಸಾಲಿಯಾನ್ ಅಧ್ಯಕ್ಷರು ಮಾಯ ಒಕ್ಕೂಟ ಉಪಸ್ಥಿತರಿದ್ದರು.

ಈ ಕಾರ್ಯಕ್ರಮವು ಡಿಸೆಂಬರ್ 12 ರಿಂದ 26 ರ ವರೆಗೆ ನಡೆಯಲಿರುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸರ್ವ ಸದಸ್ಯರು ಮತ್ತು ಸಿಬ್ಬಂದಿ ವರ್ಗ ಸಹಕರಿಸಿದರು.

Related posts

ಕುಕ್ಕಾವು ವೀರಪ್ಪ ಪೂಜಾರಿ ಅಸೌಖ್ಯದಿಂದ ನಿಧನ

Suddi Udaya

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಪಾಲಡ್ಕ-ಕುದ್ರಡ್ಕ ಒಕ್ಕೂಟದ ವತಿಯಿಂದ ಶಾಲಾ ಮಕ್ಕಳಿಗೆ ಹಣ್ಣುಹಂಪಲು ವಿತರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya
error: Content is protected !!