September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು; ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ


ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.12ರಂದು 2024-25 ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವು ಸೇಕ್ರೆಡ್ ಹಾರ್ಟ್ ಕೆಳ ಅಂತಸ್ತಿನ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ರವರು ವಹಿಸಿ ಮಾತನಾಡಿ ನಾವು ಜೀವನದಲ್ಲಿ ಗೆಲ್ಲುವುದು ಸೋಲುವುದು ಸಹಜ, ಗೆದ್ದವರು ಪ್ರಶಸ್ತಿಯನ್ನು ಪಡೆಯುತ್ತಾರೆ, ಸೋತವರು ಜೀವನದಲ್ಲಿ ಒಂದು ಪಾಠವನ್ನು ಕಲಿಯುತ್ತಾರೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ದಯಾ ವಿಶೇಷ ಶಾಲೆ, ಉಜಿರೆಯ ನಿರ್ದೇಶಕರಾದ ವಂ|ಸ್ವಾ| ವಿನೋದ್ ಮಸ್ಕರೇನಸ್ ಮಾತನಾಡಿ, ನಾವು ಜೀವನದಲ್ಲಿ ಕನಸು ಕಾಣಬೇಕು ಅದನ್ನು ನನಸುಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಆಶಾ ದೀಪ ಸೆಮಿನಾರಿಯ ಬ್ರದರ್ ಅಲ್ಡ್ರಿಕ್ ಕ್ಸೇವಿಯರ್ ರವರು,ಸೇಕ್ರೆಡ್ ಹಾರ್ಟ್ ಕಾನ್ವೆಂಟ್ ನ ನಿರ್ದೇಶಕಿಯಾದ ಸಿಸ್ಟರ್ ಅಮಿತಾರವರು, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜರವರು, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಲಾಸ್ಯ ಮತ್ತು ಮಾನ್ವಿತಾ ನಾಯಕ್ ರವರು ನಿರೂಪಿಸಿ, ಇಚ್ಚ ಶೆಟ್ಟಿಸ್ವಾಗತಿಸಿ, ಮನಸ್ವಿರವರು ಧನ್ಯವಾದವನ್ನು ಸಮರ್ಪಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

Suddi Udaya

ಎ.19-26: ಪಾರಸ್‌ ಪೃಥ್ವಿ ಜುವೆಲ್ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ವಿಶೇಷ ಕೊಡುಗೆ

Suddi Udaya
error: Content is protected !!