September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು, ಪದೇ ಪದೇ ಸುರಿಯುತ್ತಿರುವ ಮಳೆಯಿಂದ ಹೊಂಡಗಳು‌ ನೀರಿನಿಂದ ತುಂಬಿದ್ದು ರಸ್ತೆಯ ಇಕ್ಕೆಲಗಳಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರು, ಪಾದಚಾರಿಗಳು ಸಂಚಾರಕ್ಕೆ ತುಂಬಾ ತೊಂದರೆಗಳನ್ನು ಅನುಭವಿಸುವಂತಾಗಿದೆ.

ಸ್ಥಳೀಯರು ರಸ್ತೆ ದುರಸ್ಥಿಗೆ ಆಗ್ರಹಿಸಿ ಸ್ಥಳೀಯ ಆಡಳಿತಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನಗಳು ಆಗಿಲ್ಲ, ಈ ಹಿನ್ನೆಲೆಯಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯ ತೆಕ್ಕಾರು ಗ್ರಾಮ ಸಮಿತಿ ವತಿಯಿಂದ ಡಿ. 13 ರಂದು ಸರಳಿಕಟ್ಟೆ ಜಂಕ್ಷನ್ ನಲ್ಲಿ ಪ್ರತಿಭಟಣೆಯನ್ನು ಮಾಡಲಾಯಿತು.

ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರಸ್ತಾವಿಕ ಮಾತುಗಳನ್ನಾಡಿದ ಸೋಶಿಯಲ್ ಡೆಮಾಕ್ರೆಟಿ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಜನ ಪ್ರತಿನಿಧಿಗಳಿಗೆ ಮತ್ತು ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು ಒಂದು ತಿಂಗಳೊಳಗೆ ಕೆಲಸ ಆರಂಭವಾಗದಿದ್ದರೆ ತಾಲೂಕಿನ ಎಲ್ಲಾ ಕಾರ್ಯಕರ್ತರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವುದೆಂದು ಎಚ್ಚರಿಸಿದರು.


ಸಭೆಯನ್ನು ಉದ್ದೇಶಿಸಿ ಕಣಿಯೂರು ಬ್ಲಾಕ್ ಸಮಿತಿಯ ಅಧ್ಯಕ್ಷ ಮುಸ್ತಾಫ ಪೇರ್ನೆ ಮತ್ತು ಫೈಝಲ್ ಮೂರು ಗೋಳಿ ಮಾತನಾಡಿದರು. ಬ್ಲಾಕ್ ಉಪಾಧ್ಯಕ್ಷ ನಜೀರ್ ಬೂತಿನ ಅಧ್ಯಕ್ಷರುಗಳು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಸಮ್ಮದ್ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದವಿತ್ತರು.

Related posts

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

Suddi Udaya

ಮಾಲಾಡಿ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

Suddi Udaya
error: Content is protected !!