23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಮಾಲಾಡಿಯಲ್ಲಿ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪುಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಬಾಗಲಕೋಟೆ ಜಿಲ್ಲೆಯವರಾದ ಕನಕಪ್ಪ ಯಮನಪ್ಪ ಕ್ಯಾದಗೇರಿ(24) ಹಾಗೂ ರಮೇಶ್ ಚೌಹಾಣ್ (26) ಎಂಬವರಾಗಿದ್ದಾರೆ. ಮಾಲಾಡಿ ಗ್ರಾಮದ ಅರ್ತಿಲ ಎಂಬಲ್ಲಿ ಟೆರೆನ್ಸ್ ಜೋಶಲ್ ವೇಗಸ್ ಎಂಬವರಿಗೆ ಸೇರಿದ ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನವನ್ನು ಡಿ. 2 ರಂದು ರಾತ್ರಿ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದರು.

ಇದೀಗ ಇಬ್ಬರು ಆರೋಪಿಗಳನ್ನು ಬಾಗಲಕೋಟೆಯಲ್ಲಿ ಬಂಧಿಸಿರುವ ಪೊಲೀಸರು ಮೂರು ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್., ಐ. ಪಿ. ಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ. ಎಸ್ ರವರ ನಿರ್ದೇಶನದಂತೆ, ಬಂಟ್ವಾಳ ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕ ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ, ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ನೇತೃತ್ವದಲ್ಲಿ, ಪುಂಜಾಲಕಟ್ಟೆ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ನಂದ ಕುಮಾರ್ ಎಂ. ಎಂ ಮತ್ತು ಓಮನ ಎನ್. ಕೆ ರವರ ಜೊತೆಗೆ ಸಿಬ್ಬಂದಿಗಳಾದ ಸಂದೀಪ್ ಎಸ್, ರಾಹುಲ್ ರಾವ್, ರಜಿತ್, ಸಲೀಂ ಪಟೇಲ್, ಪ್ರಕಾಶ್, ರಮ್ಯ ವೇಣೂರು ಠಾಣಾ ಸಿಬ್ಬಂದಿ ಬಸವರಾಜ್ ಹಾಗೂ ಗಣಕಯಂತ್ರ ವಿಭಾಗದ ಸಿಬ್ಬಂದಿಗಳಾದ ಸಂಪತ್ ಮತ್ತು ದಿವಾಕರ ರವರು ಕಾರ್ಯನಿರ್ವಹಿಸಿರುತ್ತಾರೆ.

Related posts

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!