ಕುವೆಟ್ಟು : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಡಿ 12 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು.
ವಲಯದ ಅಧ್ಯಕ್ಷೆ ಸಿಲ್ವಿಯಾ ಬೆಳ್ತಂಗಡಿ ವಿಜೇತರಿಗೆ ಬಹುಮಾನ ವಿತರಿಸಿದರು. ವೇದಿಕೆಯಲ್ಲಿ ವಲಯದ ಗೌರವಾಧ್ಯಕ್ಷ ಜಗದೀಶ್ ಜೈನ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ವಿಜಯ ಎಚ್ ಭಟ್, ಛಾಯಾ ಕಾರ್ಯದರ್ಶಿ ವೆಂಕಟೇಶ್ ಭಟ್ ಬೆಳಾಲು, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಾಜ್ ಉಜಿರೆ, ಉಪಸ್ಥಿತರಿದ್ದರು.
ವಲಯದ ಮಾಜಿ ಅಧ್ಯಕ್ಷ ಕೆ ವಸಂತ್ ಶರ್ಮ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ಮುದ್ದು ಕಂದ ಫೋಟೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಎಝಲ್ ಬಿಯಾoಕ, ದ್ವಿತೀಯ ಜಾಹ್ನವಿ ರೈ, ತೃತೀಯ ಆನ್ಶಿ ಶೆಟ್ಟಿ , ಬಹುಮಾನ ಪಡೆದರು ಹಾಗೂ ಮೆಚ್ಚುಗೆ ಗಳಿಸಿದ ಚಿತ್ರಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಗಣೇಶ್ ಹೆಗ್ಡೆ ನಾರಾವಿ ಪ್ರಾರ್ಥನೆ ಗೈದರು ಛಾಯ ಕಾರ್ಯದರ್ಶಿ ವೆಂಕಟೇಶ್ ಭಟ್ ಸ್ವಾಗತಿಸಿ ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ವಲಯದ ಮಾಧ್ಯಮ ಪ್ರತಿನಿಧಿ ರಂಜನ್ ನೆರಿಯ ಧನ್ಯವಾದ ವಿತ್ತರು