ನವದೆಹಲಿ: ಇಲ್ಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಸೌಹಾರ್ದಯುತವಾಗಿ ಡಿ.12 ರಂದು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದ ನೀಡಿದ ಹೆಗ್ಗಡೆಯವರು ರಾಷ್ಟ್ರಪತಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.