March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.13ರಂದು ಶಾಲಾ ವಾರ್ಷಿಕೋತ್ಸವವು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ನೃತ್ಯದೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು, ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನಮ್ಮ ಈ ಶಾಲೆಯು ಈ ಮಟ್ಟಕ್ಕೆ ಬೆಳೆಯಲು ಮುಖ್ಯೋಪಾಧ್ಯಾಯರು,ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ಪೋಷಕರು ಕಾರಣಕರ್ತರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬದ್ಯಾರು ಚರ್ಚಿನ ಧರ್ಮ ಗುರುಗಳಾದ ಮತ್ತು ಎಲ್ ಎಂ ಪಿಂಟೊ ಆಸ್ಪತ್ರೆ ಬದ್ಯಾರಿನ ನಿರ್ವಾಹಕರಾದ ವಂ|ಸ್ವಾ| ರೋಶನ್ ಕ್ರಾಸ್ತಾರವರು ಮಾತನಾಡಿ ನಾವು ನಮ್ಮ ಜೀವನದಲ್ಲಿ ಉತ್ತಮ ನಾಗರಿಕರಾದರೆ ನಮ್ಮ ಪೋಷಕರು ಖುಷಿಪಡುತ್ತಾರೆ ಮತ್ತು ಮಕ್ಕಳ ಜೀವನದ ಜೊತೆಗೆ ನಾವು ಮಕ್ಕಳಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ , ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಚೇತನ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ, ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೆರಾ, ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೂರಜ್ ಚಾಲ್ಸ್ ನ್ಯೂನಸ್ , ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಶಾಂತಿ ಮೇರಿ ಡಿಸೋಜ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸೌರವ್ ಶೆಟ್ಟಿ ಮತ್ತು ಸಾನಿಯಾ ಲೀರಾರವರು ನಿರೂಪಿಸಿ, ಲಿಸ್ಟನ್ ಕಾರ್ಲ್ ಸ್ವಾಗತಿಸಿ, ರಿಶೋನ್ ಲೋಬೊ ಧನ್ಯವಾದವನ್ನು ಸಮರ್ಪಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya
error: Content is protected !!