
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.13ರಂದು ಶಾಲಾ ವಾರ್ಷಿಕೋತ್ಸವವು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ನೃತ್ಯದೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು, ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನಮ್ಮ ಈ ಶಾಲೆಯು ಈ ಮಟ್ಟಕ್ಕೆ ಬೆಳೆಯಲು ಮುಖ್ಯೋಪಾಧ್ಯಾಯರು,ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ಪೋಷಕರು ಕಾರಣಕರ್ತರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬದ್ಯಾರು ಚರ್ಚಿನ ಧರ್ಮ ಗುರುಗಳಾದ ಮತ್ತು ಎಲ್ ಎಂ ಪಿಂಟೊ ಆಸ್ಪತ್ರೆ ಬದ್ಯಾರಿನ ನಿರ್ವಾಹಕರಾದ ವಂ|ಸ್ವಾ| ರೋಶನ್ ಕ್ರಾಸ್ತಾರವರು ಮಾತನಾಡಿ ನಾವು ನಮ್ಮ ಜೀವನದಲ್ಲಿ ಉತ್ತಮ ನಾಗರಿಕರಾದರೆ ನಮ್ಮ ಪೋಷಕರು ಖುಷಿಪಡುತ್ತಾರೆ ಮತ್ತು ಮಕ್ಕಳ ಜೀವನದ ಜೊತೆಗೆ ನಾವು ಮಕ್ಕಳಿಗೆ ಒಳ್ಳೆಯ ಮೌಲ್ಯಗಳನ್ನು ಕಲಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ , ಪುಂಜಾಲಕಟ್ಟೆ ವಲಯದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಚೇತನ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ, ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೆರಾ, ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೂರಜ್ ಚಾಲ್ಸ್ ನ್ಯೂನಸ್ , ಸೇಕ್ರೆಡ್ ಹಾರ್ಟ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಶಾಂತಿ ಮೇರಿ ಡಿಸೋಜ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಪೋಷಕರು, ಶಿಕ್ಷಕ – ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಸೌರವ್ ಶೆಟ್ಟಿ ಮತ್ತು ಸಾನಿಯಾ ಲೀರಾರವರು ನಿರೂಪಿಸಿ, ಲಿಸ್ಟನ್ ಕಾರ್ಲ್ ಸ್ವಾಗತಿಸಿ, ರಿಶೋನ್ ಲೋಬೊ ಧನ್ಯವಾದವನ್ನು ಸಮರ್ಪಿಸಿದರು.