ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ.
ಡಿ 27 ರಿಂದ 29 ರ ವರೆಗೆ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿರುವುದು.
ಇವರು ಕಳೆದ 40 ವರ್ಷಗಳಿಂದ ವೈದಿಕ ಪೌರೋಹಿತ್ಯ ವೃತ್ತಿಯಲ್ಲಿದ್ದು,.ವೇದಬ್ರಹ್ಮ ಪಳ್ಳತ್ತಡ್ಕ ವಿಶ್ವೇಶ್ವರ ಭಟ್
ವೇದಮೂರ್ತಿ ಪಳ್ಳತ್ತಡ್ಕ ಪರಮೇಶ್ವರ ಭಟ್ ವೇದಮೂರ್ತಿ ಕೇಶವ ಜೋಯಿಶ್ ಕರುವಜೆ ಇವರ ಶಿಷ್ಯ.
ಏಳು ವರ್ಷಗಳ ಕಾಲ ವರದಹಳ್ಳಿ ಶ್ರೀಧರಾಶ್ರಮದಲ್ಲಿ ಸಂಪೂರ್ಣ ಕೃಷ್ಣ ಪೌರೋಹಿತ್ಯದ ಜೊತೆಗೆ ಅನೇಕ ಶಿಷ್ಯರನ್ನು ತಯಾರು ಮಾಡಿ ಸಮಾಜಕ್ಕೆ ಕೊಡುಗೆಯನ್ನಾಗಿ ನೀಡಿರುತ್ತಾರೆ.
ಕೇರಳ, ತಮಿಳುನಾಡು, ಮಹಾರಾಷ್ಟ್ರ, ಮಣಿಪುರ ಅಲ್ಲದೇ ವಿದೇಶಗಳಾದ ಮಸ್ಕತ್ ಮತ್ತು ಶ್ರೀಲಂಕಾದಲ್ಲೂ ಪೌರೋಹಿತ್ಯದ ನೇತೃತ್ವ ವಹಿಸಿಕೊಂಡಿರುವುದು ಇವರ ವಿಶೇಷತೆ. ಮತ್ತು ಇವರ ಮಗ ಈಶ್ವರ ಶರ್ಮ, ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.