ಸುಲ್ಕೇರಿ : ಪರಿಶ್ರಮ ಮತ್ತು ತ್ಯಾಗದಿಂದ ಸಾಧನೆಯ ಶಿಖರವನ್ನು ಮುಟ್ಟಬಹುದು ಎಂದು ಸುಲ್ಕೇರಿ ಶ್ರೀರಾಮ ಶಾಲೆಯ ಆಡಳಿತ ಮಂಡಳಿ ಗೌರವಾಧ್ಯಕ್ಷ ಗಣೇಶ್ ಹೆಗ್ಡೆ ಹೇಳಿದರು.
ಅವರು ಡಿ. 13 ರಂದು ಸುಲ್ಕೇರಿ ಶ್ರೀರಾಮ ಶಾಲೆಯ ಸಾಂಸ್ಕೃತಿಕ ವೈಭವದ ಅಂಗವಾಗಿ ಕ್ರೀಡಾ ಕಲರವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕ್ರೀಡಾ ಕಲರವ ಇದರ ಉದ್ಘಾಟನೆಯನ್ನು ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ ಸುಲ್ಕೇರಿ ನೇರವೇರಿಸಿ ಶುಭ ಕೋರಿದರು.
ವೇದಿಕೆಯಲ್ಲಿ ಮಹಮ್ನಾಯಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುನೀಲ್ ಪೂಜಾರಿ,ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ, ಸುಲ್ಕೇರಿ ಗ್ರಾ.ಪಂ ಸದಸ್ಯ ನಾರಾಯಣ ಪೂಜಾರಿ,ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಪಾರ್ಶ್ವನಾಥ ಜೈನ್, ಸುದ್ದಿ ಉದಯ ವಾರಪತ್ರಿಕೆಯ ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ಬಳಂಜ,ವಾಣಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಹರೀಶ್,ಶ್ರೀರಾಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ ಕುಮಾರ್, ಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್ ಎಸ್ ಮಾಲಗೊಂಡ ಉಪಸ್ಥಿತರಿದ್ದರು.
ಶಾಲಾ ದೈಹಿಕ ಶಿಕ್ಷಕಿ ಜೈಶಾ ಸ್ವಾಗತಿಸಿ,ಶಿಕ್ಷಕಿ ಹೇಮಾಲತ ನಿರೂಪಿಸಿ, ಶಿಕ್ಷಕ ಸತೀಶ್ ವಂದಿಸಿದರು. ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸಹಕರಿಸಿದರು.
ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.