32.1 C
ಪುತ್ತೂರು, ಬೆಳ್ತಂಗಡಿ
December 18, 2024
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ(52) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದಿಂದ ಅಯ್ಯಪ್ಪ ವೃತ ಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related posts

ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜು: ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ಪೆರ್ಲ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ವತಿಯಿಂದ ಭಜನೋತ್ಸವ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!