ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ(52) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದಿಂದ ಅಯ್ಯಪ್ಪ ವೃತ ಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related posts

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಬಾಲಕಿಯರ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya
error: Content is protected !!