ಅಳದಂಗಡಿ:ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅಳದಂಗಡಿ ಕ್ಷೇತ್ರದಲ್ಲಿ ಡಿ.15ರಂದು ನಡೆಯಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರ ನಿಧಿಯಿಂದ ರೂ. 10ಲಕ್ಷ ಅನುದಾನ ನೀಡುವ ಭರವಸೆ ನೀಡಿದರು.
ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ದೇಗುಲದ ಜೀರ್ಣೋದ್ಧಾರ ಕಾರ್ಯ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು.
ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಮಾತನಾಡಿ ಕ್ಷೇತ್ರದ ವಠಾರದಲ್ಲಿ ಸರಕಾರದಿಂದ ಸುಸಜ್ಜಿತವಾದ ಶೌಚಾಲಯ ನಿರ್ಮಿಸಿ ಕೊಡುತ್ತೇವೆ ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯರಾದ ಮಲ್ಲಿಕಾ ಪ್ರಶಾಂತ್ ಪಕ್ಕಳ,ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಯೋಗೀಶ್ ಕುಮಾರ್ ನಡಕ್ಕರ ಉಪಸ್ಥಿತರಿದ್ದರು.
ಜಿಲ್ಲಾ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ ಸ್ವಾಗತಿಸಿದರು. ಶಿವಪ್ರಸಾದ್ ಅಜಿಲ ಪ್ರಾಸ್ತಾವಿಕ ಮಾತನ್ನಾಡಿದರು.ಪಿ.ಹೆಚ್.ನಿತ್ಯಾನಂದ ಶೆಟ್ಟಿ ನಿರೂಪಿಸಿದರು.ಡಾ.ಪ್ರತೀತ್ ಅಜಿಲ ವಂದಿಸಿದರು.
ಕಾರ್ಯಕ್ರಮದಲ್ಲಿ ಕೆ.ವಸಂತ ಸಾಲಿಯಾನ್,ಗಂಗಾಧರ ಮಿತ್ತಮಾರ್,ಡಾ.ಎಂ.ಎನ್.ತುಳಪುಳೆ,ಸದಾನಂದ ಪೂಜಾರಿ ಉಂಗೀಲಬೈಲು, ಸಂತೋಷ್ ಕುಮಾರ್ ಕಾಪಿನಡ್ಕ, ಜಗನ್ನಾಥ ಶೆಟ್ಟಿ,ಸುಂದರ ಶೆಟ್ಟಿ ಸುಲ್ಕೇರಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.