23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಮೂಡುಬೈಲು ನಿವಾಸಿ ಮಾಧವ ಆಚಾರಿ(52) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದಿಂದ ಅಯ್ಯಪ್ಪ ವೃತ ಧಾರಿಗಳನ್ನು ಶಬರಿಮಲೆ ಯಾತ್ರೆಗೆ ಕೊಂಡೊಯ್ಯುವ ಖಾಸಗಿ ಬಸ್ಸು ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದು, ಬೈಕ್ ಸವಾರ ಕೊಕ್ಕಡದಿಂದ ಕಾಪಿನಬಾಗಿಲಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಮೃತರಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತ ದೇಹವನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!