April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

ಉಜಿರೆ: “ಒಂದೊಂದು ನಿಮಿಷವೂ ಬಂಗಾರದ ನಾಣ್ಯಕ್ಕೆ ಸಮ. ಪ್ರತಿಯೊಂದು ಸ್ಪರ್ಧೆಯ ಉದ್ದೇಶ ನಿಮ್ಮಲ್ಲಿರುವ ಸಾಮರ್ಥ್ಯವನ್ನು ಹೊರತೆಗೆಯುವುದೇ ಆಗಿದೆ. ನಮ್ಮನ್ನು ಇನ್ನೊಬ್ಬರಿಗೆ ಹೋಲಿಸುವುದರ ಬದಲು ನಮ್ಮಲ್ಲಿರುವ ಪ್ರತಿಭೆಯನ್ನು ನಾವು ಗುರುತಿಸುವ” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ್ದ “ಬಹುಮಾನ ವಿತರಣಾ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನಡೆಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಡಾ. ದಿಲೀಪ್ ಕುಮಾರ್, ಅತಿಷಯ ಜೈನ್, ವಿಜೇಶ್ ಜೈನ್ ಹಾಗೂ ಶರ್ಮಿತ್ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ಗುಂಪು ಗಾಯನ, ಕೊಳಲು, ಹಾರ್ಮೋನಿಯಂ, ತಬಲ ಹಾಗೂ ವೀಣಾ ವಾದನ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ಹಾಗೂ ಸವಿತಾ ವೇದ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಧರ್ಮಸ್ಥಳ : ಚರಂಡಿಗೆ ಉರುಳಿ ಬಿದ್ದ ವಾಹನಗಳು

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!