25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಜಿರೆಯ ಎನ್ ಎ ಬಿ ಹೆಚ್ ರಾಷ್ಟ್ರಿಯ ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ವತಿಯಿಂದ ಡಿ15 ರಂದು ಉಜಿರೆ ಗ್ರಾಮದ ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಕೆ ಅವರು ಇತ್ತೀಚಿನ ದಿನಗಳಲ್ಲಿ ಯಾವ ಸಮಯದಲ್ಲಿ ನಮ್ಮ ಆರೋಗ್ಯ ಏರುಪೇರಾಗುತ್ತದೆ ಮತ್ತು ಅಪಘಾತಗಳು ಸಂಭವಿಸುತ್ತದೆಂದು ನಿಶ್ಚಿತವಿಲ್ಲದ ಕಾರಣ ಪ್ರತಿಯೊಬ್ಬರೂ ಆರೋಗ್ಯ ವಿಮೆ ಮಾಡಿಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುದರಿಂದ ಅನುಕೂಲವಾಗುತ್ತದೆ ಮತ್ತು ಖರ್ಚುವೆಚ್ಚಗಳನ್ನು ಭರಿಸಲು ಸಹಾಯವಾಗುತ್ತದೆಂದು ತಿಳಿಸಿದರು.

ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೀಮತಿ ಉಷಾಕಿರಣ ಕಾರಂತ್ ರವರು ಆರೋಗ್ಯ ಶಿಬಿರ ಉದ್ಘಾಟಿಸಿ ಗ್ರಾಮೀಣ ಪ್ರದೇಶದಲ್ಲಿರುವ ನಮ್ಮ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಅಲ್ಲಿಯ ವೈದ್ಯರು ಮತ್ತು ಸಿಬ್ಬಂದಿಗಳ ನಗುಮೊಗದ ಸೇವೆ, ನಗರದ ಆಸ್ಪತ್ರೆಗಳಲ್ಲಿ ಸಿಗುವ ಎಲ್ಲಾ ಚಿಕಿತ್ಸಾ ಸೌಲಭ್ಯದೊಂದಿಗೆ ಅತ್ಯುತ್ತಮ ಚಿಕಿತ್ಸೆ ನೀಡುತ್ತಿದೆಯೆಂದು ತಿಳಿಸಿ ಈ ಉಚಿತ ಶಿಬಿರದ ಪ್ರಯೋಜನವನ್ನು ಪರಿಸರದ ಜನತೆ ಪಡೆದೊಳ್ಳುವಂತೆ ಕರೆ ನೀಡಿದರು.


ಮುಖ್ಯ ಅತಿಥಿಗಳಾದ ವಲೇರಿಯನ್ ಡಿಸೋಜ ದೈಹಿಕ ಶಿಕ್ಷಣ ಶಿಕ್ಷಕರು ಮಡಂತ್ಯಾರು, ಡಾ. ಭಾರತಿ ಜಿ ಕೆ, ಶ್ರೀ ಅನಿಲ್ ಡಿಸೋಜ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬದನಾಜೆ ಇವರುಗಳು ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಸ್ಥಳೀಯ ಯುವಕ ಮಂಡಲ, ಯುವತಿ ಮಂಡಲ, ಹಿರಿಯ ವಿದ್ಯಾರ್ಥಿ ಸಂಘ, ಸುಜ್ಞಾನ ನಿಧಿ ಯೋಜನೆ ಮತ್ತು ಭಜನಾ ಮಂಡಳಿಗಳು ಆರೋಗ್ಯ ಶಿಬಿರದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸಿದರು.


ಬೆನಕ ಆಸ್ಪತ್ರೆಯ ಡಾ. ಆದಿತ್ಯ ರಾವ್ ತುರ್ತು ಚಿಕಿತ್ಸಾ ವೈದ್ಯರು, ಡಾ. ಅಂಕಿತ ಜಿ ಭಟ್ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ , ಡಾ. ರೋಹಿತ್ ಜಿ ಭಟ್ ಎಲುಬು ಕೀಲು ಮತ್ತು ಕೈ ಮೈಕ್ರೋ ಸರ್ಜರಿ , ಡಾ. ಶಂತನು ಪ್ರಭು ಮಕ್ಕಳು ತಜ್ಞರು, ಡಾ. ಅಖಿಲ್ ವಿಜಯನ್ ಇವರುಗಳು ಶಿಬಿರದಲ್ಲಿ ಪಾಲ್ಗೊಂಡು ಪರಿಸರದ ಜನತೆಯ ಆರೋಗ್ಯ ತಪಾಸಣೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡಿದರು.


ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಶೀಮತಿ ಲಲಿತಾ ಕುಮಾರಿ ಸ್ವಾಗತಿಸಿ, ಅಧ್ಯಾಪಕ ಸುರೇಶ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಅರ್ಪಿಸಿದರು. ಈ ಸಂದರ್ಭದಲ್ಲಿ ಊರವರ ಪರವಾಗಿ ಡಾ. ಗೋಪಾಲಕೃಷ್ಣ ಮತ್ತು ಡಾ. ಭಾರತಿ ಯವರನ್ನು ಸನ್ಮಾನಿಸಲಾಯಿತು.

Related posts

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya
error: Content is protected !!