28 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

ಬಂದಾರು : ಜ 7 ರಿಂದ 12 ನಡೆಯುವ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಿ 16 ರಂದು ದೇವಸ್ಥಾನದ ವಠಾರದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು ಹಾಗೂ ಕನಸಿನ ಮನೆ ಲಕ್ಷೀ ಇಂಡಸ್ಟ್ರೀಸ್ ಉಜಿರೆ ಇದರ ಮಾಲಕ ಮೋಹನ್ ಕುಮಾರ್ ಚಪ್ಪರ ಮುಹೂರ್ತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರದಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು , ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ , ಪ್ರಧಾನ ಕಾರ್ಯದರ್ಶಿ ಹರೀಶ್ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಆಂಗಡಿಮಜಲು, ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿತ ಮೊಕ್ತೇಸರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಮಾಜಿ ಅಧ್ಯಕ್ಷರಾದ ಹೊನ್ನಪ್ಪ ಗೌಡ, ಜೀರ್ಣೊದ್ದಾರ ಸಮಿತಿ ಮಾಜಿ ಅಧ್ಯಕ್ಷರಾದ ಆದಪ್ಪ ಗೌಡ ಹಾರ್ತ್ಯಾರು, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು, ಚಪ್ಪರ ಸಮಿತಿ ಸಂಚಾಲಕರಾದ ಗೋಪಾಲಗೌಡ ಅಡ್ಡಾರು, ರಮೇಶ್ ಪೂಜಾರಿ ಹಾಗೂ ಇನ್ನು ಅನೇಕ ಗಣ್ಯರ ಸಮ್ಮುಖದಲ್ಲಿ ಚಪ್ಪರ ಮುಹೂರ್ತ ನಡೆದು ಬ್ರಹ್ಮಕಲಶೋತ್ಸವದ ಅಧಿಕೃತವಾಗಿ ಪೂರ್ವಸಿದ್ಧತೆ ಕೆಲಸ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!