ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

ಕನ್ಯಾಡಿ ll: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವದ ಪ್ರಯುಕ್ತವಾಗಿ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ ಸಾಂಸ್ಕೃತಿಕ ಸ್ಪರ್ಧೆ ಮತ್ತು ಕ್ರೀಡಾ ಸ್ಪರ್ಧೆಯ ಬಹುಮಾನವನ್ನು ಡಿ.12 ರಂದು ವಿತರಿಸಲಾಯಿತು.

ಮುಖ್ಯ ಅತಿಥಿಗಳಾದ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪಿ. ಶ್ರೀನಿವಾಸ್ ರಾವ್ ಬಹುಮಾನ ನೀಡುವ ಮೂಲಕ ಮಕ್ಕಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಭಾರತಿ, ಎಸ್ ಡಿ ಎಂ ಸಿ ಅಧ್ಯಕ್ಷ ನಂದಾ ಕೆ, ಉಪಾಧ್ಯಕ್ಷೆ ಶ್ರೀಮತಿ ರಮ್ಯ, ಗೌರವ ಸಲಹೆಗಾರ ರಾಜೇಂದ್ರ ಅಜ್ರಿ, ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪ ಎನ್, ಎಸ್ ಡಿ ಎಂ ಸಿ ಸದಸ್ಯರು ಮಕ್ಕಳಿಗೆ ಬಹುಮಾನವನ್ನು ವಿತರಿಸಲು ಕೈಜೋಡಿಸಿದರು.

ಶಾಲೆಯ ಸಹ ಶಿಕ್ಷಕರು, ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕರಾದ ಶ್ರೀಮತಿ ಶ್ವೇತ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಸಹ ಶಿಕ್ಷಕರಾದ ನಾಗರಾಜ್ ಬಾರ್ಕೆರ್ ನಿರೂಪಿಸಿದರು.

Related posts

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕನ್ಯಾಡಿ ಪುನಶ್ಚೇತನ ಕೇಂದ್ರಕ್ಕೆ ರೂ.10 ಲಕ್ಷ ಅನುದಾನ

Suddi Udaya

ಬೋಳಿಯಾರ್ ಸಮೀಪ ಕಾರಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಖಾಲಿದ್ ಪುಲಾಬೆ ಆಯ್ಕೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya
error: Content is protected !!