22.5 C
ಪುತ್ತೂರು, ಬೆಳ್ತಂಗಡಿ
December 18, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ , ಪ್ರತಿಭಾ ಪುರಸ್ಕಾರ ಸನ್ಮಾನ, ಹಾಗೂ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಯುವ ಸಾಹಿತಿ ಚಂದ್ರಹಾಸ ಬಳೆಂಜ ಮಾತನಾಡಿ ಹತ್ತು ಹಲವು ಸಮಾಜಮುಖಿ ಕೆಲಸ ಕಾರ್ಯಗಳಿಂದ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಅಕ್ಷರಶಃ ಪಾಲಿಸಿಕೊಂಡು ಬಂದಿರುವ ಈ ಸಂಘಟನೆ ತಾಲೂಕಿಗೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನೋರ್ವ ಅತಿಥಿ ಗ್ರಾಮ ಪಂಚಾಯತ್ ಕುಕ್ಕೇಡಿ ಅಧ್ಯಕ್ಷೆ ಶ್ರೀಮತಿ ಅನಿತಾರವರು ಮಾತಾಡಿ ಈ ಸಂಘಟನೆಯಿಂದ ಇನಷ್ಟು ಕೆಲಸ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.


ಕೋಟಿ ಚೆನ್ನಯ ಸೇವಾ ಸಂಘದ ಅಧ್ಯಕ್ಷರತ್ನಾಕರ ಸಾಲ್ಯಾನ್ ಅಂಕರ್ಜಾಲ್ ಮಾತನಾಡಿ ನನ್ನ ಎರಡು ವರ್ಷಗಳ ಅವಧಿಯಲ್ಲಿ ನಿಮ್ಮ ಎಲ್ಲರ ಸಹಕಾರದಿಂದ ಅನೇಕ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದು ಮುಂದೆಯೂ ಮುಂದಿನ ಅವಧಿಗೆ ಆಯ್ಕೆಯಾದ ಅಧ್ಯಕ್ಷರು ಪದಾಧಿಕಾರಿಗಳಿಗೆ ಸಹಕಾರ ನೀಡಿ ನಾವೆಲ್ಲರೂ ಒಟ್ಟಾಗಿ ಸಮಾಜಕ್ಕೆ ಮಾದರಿಯಾಗುವ ಕೆಲಸ ಕಾರ್ಯಗಳನ್ನು ಮಾಡಲು ಸಹಕರಿಸೋಣ ಎಂದು ಸಲಹೆವಿತ್ತರು.

ಕು.ಅನನ್ಯ ಮತ್ತು ಕು.ದಕ್ಷರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಗೌರವ ಅಧ್ಯಕ್ಷ ಅಮ್ಮಾಜಿ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ರವಿ ಉಲ್ತೂರ್ ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು. ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ಅರ್ಚನೆ ಮಾಡುವ ಮೂಲಕ ಗುರುನಮನ ಕಾರ್ಯಕ್ರಮ ನಡೆಸಲಾಯಿತು. ಮನೋರಂಜನೆಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನುಶ್ರೀಮತಿ ಯಶಲತ ಅಮ್ಮಾಜಿ ಕೋಟ್ಯಾನ್ ನಡೆಸಿ ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.

ಎಸೆಸೆಲ್ಸಿ ಮತ್ತು ಪಿಯುಸಿ ಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ನೂತನ ಸಮಿತಿಗೆ ಸಂಘದ ದಾಖಲೆ ಪುಸ್ತಕಗಳನ್ನು ಹಸ್ತಾಂತರಿಸುವ ಮೂಲಕ ಪದಗ್ರಹಣ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಕುಕ್ಕೇಡಿಯ ನಿಕಟ ಪೂರ್ವ ಅಧ್ಯಕ್ಷ ಜನಾರ್ದನ ಪೂಜಾರಿ, ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ, ಕೋಟಿ ಚೆನ್ನಯ ಸೇವಾ ಸಂಘದ ಸ್ಥಾಪಕಾಧ್ಯಕ್ಷ ಸತೀಶ್ ಕೆರಿಯರ್ ಶಿರ್ಲಾಲು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಹರೀಶ್ ಕಲ್ಲಾಜೆ, ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಯತೀಶ್ ಪೂಜಾರಿ ಕರಂಬಾರು ಮತ್ತಿತರರು ಉಪಸ್ಥಿತರಿದ್ದರು.

ಲೋಕಯ್ಯ ಪೂಜಾರಿ ಕಂಗ್ಗಿತ್ತಿಲು ಕಾರ್ಯಕ್ರಮ ನಿರೂಪಿಸಿದರು. ನವೀನ್ ಜೆ ಬುಳೆಕ್ಕಾರ ಧನ್ಯವಾದವಿತ್ತರು ಸಂಘದ ಎಲ್ಲ ಸದಸ್ಯರು ಸಹಕರಿಸಿದರು.

Related posts

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ಬಳ್ಳಮಂಜ ಬಸದಿಯಲ್ಲಿ 37ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಮಹಾಶಿವರಾತ್ರಿ: ಧಮ೯ಸ್ಥಳಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಪಾದಯಾತ್ರಿಗಳು

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya
error: Content is protected !!